ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಗೆ ಇಲ್ಲಿದೆ ಕಾರಣಗಳು..

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.
ಇಂದು (ಮಂಗಳವಾರ) ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ.

ಮಂಗಳವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿಯ ವಿಧಾನಸಭಾ ಸಭೆಯಲ್ಲಿ ಬೊಮ್ಮೈ ಪಕ್ಷದ ನಾಯಕರಾಗಿ ಆಯ್ಕೆಯಾದರು
ಕರ್ನಾಟಕದ ಉಸ್ತುವಾರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಗಳವಾರ ತಮ್ಮ ಉತ್ತರಾಧಿಕಾರಿಯಾಗಿ ಬಸವರಾಜ ಬೊಮ್ಮಯಿ ಅವರ ಹೆಸರನ್ನು ಸೂಚಿಸಿದರು ಇಂದು ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆದ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿಟ್ಟಿನಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಬೊಮ್ಮಾಯಿ ಅವರ ಹೆಸರನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಪ್ರಸ್ತಾಪಿಸಿದರು ಮತ್ತು ಕೆ.ಎಸ್.ಈಶ್ವರಪ್ಪ, ಆರ್ ಅಶೋಕ್, ಗೋವಿಂದ್ ಕಾರ್ಜೋಲ್ ಮತ್ತು ಇತರ ಶಾಸಕರು ಅನುಮೋದನೆ ಮಾಡಿದರು.
ಇದಕ್ಕೂ ಮುನ್ನ ಮಂಗಳವಾರ ಬಸವರಾಜ್ ಬೊಮ್ಮಾಯಿ ಬಿಜೆಪಿ ಕೇಂದ್ರ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್, ಜಿ ಕಿಶನ್ ರೆಡ್ಡಿ ಮತ್ತು ಅರುಣ್ ಸಿಂಗ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾದರು. ಪ್ರಧಾನ್ ಮತ್ತು ರೆಡ್ಡಿ ಕೇಂದ್ರ ಕ್ಯಾಬಿನೆಟ್ ಮಂತ್ರಿಗಳಾಗಿದ್ದರೆ, ಸಿಂಗ್ ಅವರು ಬಿಜೆಪಿಯ ಕರ್ನಾಟಕ ಮತ್ತು ರಾಜಸ್ಥಾನದ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಮಂಗಳವಾರ ನಡೆದ ಆಯ್ಕೆಯ ಮೊದಲು ಕರ್ನಾಟಕದ ಕನಿಷ್ಠ 40 ಬಿಜೆಪಿ ಶಾಸಕರು ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದರು ಎಂದು ವರದಿಯಾಗಿದೆ. ಮುಖ್ಯಮಂತ್ರಿ ಹುದ್ದೆಗೆ ಮುಂಚೂಣಿಯಲ್ಲಿರುವವರಲ್ಲಿ ಅವರ ಹೆಸರು ಹೊರಹೊಮ್ಮಿತು.
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್.ಬೊಮ್ಮಾಯಿಯವರ ಪುತ್ರನಾಗಿರುವ ಅವರು, ಜನತಾದಳದಿಂದ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಜವಾಬ್ದಾರಿ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2008ರಿಂದ ಸತತ ಮೂರು ಬಾರಿ ಶಿಗ್ಗಾಂವ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದು, ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಮತ್ತು ಜಗದೀಶ ಶೆಟ್ಟರ ಮುಖ್ಯಮಂತ್ರಿ ಆಗಿದ್ದಾಗ ಐದು ವರ್ಷಗಳ ಕಾಲ ಜಲಸಂಪನ್ಮೂಲ ಖಾತೆ ನಿರ್ವಹಣೆ ಮಾಡಿದ ಅನುಭವ ಹೊಂದಿದ್ದಾರೆ.
ೀಗಿನ ಬಿಜೆಪಿ ಸರ್ಕಾರದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರ, ಶಾಸನ ರಚನಾ ಸಚಿವ ಹಾಗೂ ಹಾವೇರಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ನಿರ್ವಹಿಸಿದ ಅನುಭವಗಳನ್ನು ಬಸವರಾಜ ಬೊಮ್ಮಾಯಿ ಹೊಂದಿದ್ದಾರೆ.
ಮುಖ್ಯಮಂತ್ರಿ ರೇಸ್‌ನಲ್ಲಿ ಶಾಸಕ ಅರವಿಂದ್ ಬೆಲ್ಲದ್, ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ, ಸಚಿವರಾದ ಬಸವರಾಜ ಬೊಮ್ಮಾಯಿ, ಮುರುಗೇಶ್ ನಿರಾಣಿ, ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸೇರಿ ಹಲವರ ಹೆಸರುಗಳು ಕೇಳಿಬಂದಿತ್ತು.
ಆದರೆ ಇಂದು ಬಸವರಾಜ್ ಬೊಮ್ಮಾಯಿ ಹಾಗೂ ಯುವ ಮುಖ ಅರವಿಂದ್ ಬೆಲ್ಲದ್ ಅವರ ನಡುವೆ ತೀವ್ರ ಪೈಪೋಟಿ ನಡೆದಿದೆ ಎಂದು ವರದಿಯಾಗಿತ್ತು. ಅಂತಿಮವಾಗಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆಯಾಗಿದ್ದಾರೆ.
ಬೊಮ್ಮಾಯಿ ಆಯ್ಕೆಗೆ ಕಾರಣಗಳು..
ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ಅವರ ಆಪ್ತರಲ್ಲೊಬ್ಬರು. 2008 ರಲ್ಲಿ ಬಿಜೆಪಿಗೆ ಸೇರುವ ಮೊದಲು, ಬಸವರಾಜ್ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ, ಜೆ.ಎಚ್‌.ಪಟೇಲ್‌ ಸೇರಿದಂತೆ ಹಿರಿಯ ರಾಜ್ಯ ನಾಯಕರೊಂದಿಗೆ ಕೆಲಸ ಮಾಡಿದ್ದಾರೆ.
ಇಷ್ಟಾದರೂ ಬಿಜೆಪಿಗೆ ಪಕ್ಷ ನಿಷ್ಠ. ಅವರು ಜನತಾದಳ (ಸಂಯುಕ್ತ)ದಿಂದ ಬಿಜೆಪಿಗೆ ಬಂದವರು. ಆದರೂ ಸೇರಿದ ಬಿಜೆಪಿ ಸೇರಿದ ಮೇಲೆ ತೋರಿದ ಪಕ್ಷ ನಿಷ್ಠೆ ಅವರಿಗೆ ಪ್ಲಸ್‌ ಆಯಿತು. ಯಾಕೆಂದರೆ ಯಡಿಯೂರಪ್ಪ ಬಿಜೆಪಿ ತೊರೆದು ಕೆಜೆಪಿಗೆ ಹೋದಾಗಲೂ ಯಡಿಯೂರಪ್ಪ ಜೊತೆಗೆ ಆಪ್ತತೆ ಇದ್ದರೂ ಹೋಗದೆ ಬಿಜೆಪಿಯಲ್ಲಿಯೇ ಉಳಿದರು.
ಕರ್ನಾಟಕದ ಅತಿ ದೊಡ್ಡ ಸಮುದಾಯವಾದ ಲಿಂಗಾಯತ ಸಮಾಜಕ್ಕೆ ಸೇರಿದವರು.ರಾಜಕೀಯದಲ್ಲಿ ಅಪಾರ ಅನುಭವ ಹೊಂದಿದ್ದಾರೆ ಹಾಗೂ ಚಾಣಾಕ್ಷ ರಾಜಕಾರಣಿ. ಸಂಯಮ ವ್ಯಕ್ತಿತ್ವ. ಇವೆಲ್ಲ ಅಂಶಗಳು ಅವರು ಮುಖ್ಯಮಂತ್ರಿಯಾಗಲು ಕಾರಣವಾದ ಅಂಶಗಳು.
ನಿಜವಾಯ್ತು ಯತ್ನಾಳ ಭವಿಷ್ಯ..:
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮೊದಲೇ ಸುಳಿವು ನೀಡಿದ್ದು, ಉತ್ತರ ಕರ್ನಾಟಕದ ಲಿಂಗಾಯತ ನಾಯಕರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದರು. ಅವರ ಭವಿಷ್ಯ ನಿಜವಾಗಿದೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಲಿಂಗಾಯಿತ ಸಮುದಾಯದ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಶಿಗ್ಗಾಂವಿ ಕ್ಷೇತ್ರದ ಶಾಸಕರಾದ, ಸರ್ಕಾರದಲ್ಲಿ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಬಸವರಾಜ ಬೊಮ್ಮಾಯಿ ಅವರಿಗೆ ಸಿಎಂ ಹುದ್ದೆ ಒಲಿದು ಬಂದಿದ್ದು, ಈ ಮೂಲಕ ಯಡಿಯೂರಪ್ಪ ನಾಯಕತ್ವವೂ ಬದಲಾವಣೆ ಆಗಿದೆ.
ಬಸವನಗೌಡ ಪಾಟೀಲ ಯತ್ನಾಳ ನಾಯಕತ್ವ ಬದಲಾವಣೆ ಹಾಗೂ ಉತ್ತರ ಕರ್ನಾಟಕದ ಲಿಂಗಾಯತ ನಾಯಕರಿಗೆ ಮುಖ್ಯಮಂತ್ರಿ ಹುದ್ದೆ ಬಗ್ಗೆ ಹಲವು ಬಾರಿ ಪ್ರಸ್ತಾಪಿಸಿದ್ದು, ಅವರ ಭವಿಷ್ಯ ನಿಜವಾಗಿದೆ.
ಬಸವರಾಜ ಬೊಮ್ಮಾಯಿ 1960ರ ಜನವರಿ 18ರಂದು ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಜನಿಸಿದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ಆರ್. ಬೊಮ್ಮಾಯಿ ಪುತ್ರರಾದ ಇವರು ರಾಜಕೀಯ ಹಿನ್ನೆಲೆ ಹೊಂದಿದ್ದರು. ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದುಕೊಂಡಿದ್ದಾರೆ. ಪತ್ನಿ ಹೆಸರು ಚೆನ್ನಮ್ಮ ಹಾಗೂ ಇಬ್ಬರು ಮಕ್ಕಳಿದ್ದಾರೆ. ಜನತಾದಳದೊಂದಿಗೆ ತಮ್ಮ ರಾಜಕೀಯ ಪ್ರಯಾಣ ಪ್ರಾರಂಭಿಸಿದ ಬಸವರಾಜ್ ಬೊಮ್ಮಾಯಿ ಕರ್ನಾಟಕ ವಿಧಾನಸೌಧಕ್ಕೆ ಎರಡು ಬಾರಿ ಧಾರವಾಡ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ.
2008ರಲ್ಲಿ ಅವರು ಪಕ್ಷವನ್ನು ಬದಲಾಯಿಸಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು. 2008ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದು ಗೆಲುವು ಸಾಧಿಸಿದ ಅವರನ್ನು ಜಲಸಂಪನ್ಮೂಲ ಸಚಿವರಾಗಿ ನೇಮಕಗೊಳಿಸಲಾಯಿತು.
ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಾಗಿನಿಂದಲೂ ಅವರು ಸಹಕಾರ ಸಚಿವ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮತ್ತು ಗೃಹ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 1997, 2003ರಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‍ಗೆ ಆಯ್ಕೆ ಆಗಿದ್ದರು. 2008ರಲ್ಲಿ ಬಿಜೆಪಿಗೆ ಸೇರ್ಪಡೆ, ಶಿಗ್ಗಾಂವಿಯಿಂದ ವಿಧಾನಸಭೆಗೆ ಆಯ್ಕೆಯಾಗಿ ಯಡಿಯೂರಪ್ಪ, ಸದಾನಂದ ಗೌಡ,ಜಗದೀಶ ಶೆಟ್ಟರ್ ಸರ್ಕಾರದಲ್ಲಿ ಸಚಿವರಾಗಿದ್ದರು.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

4.8 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement