ಮುಂದಿನ ತಿಂಗಳು ಮಕ್ಕಳಿಗೆ ಕೋವಿಡ್ -19 ಲಸಿಕೆ ಲಭ್ಯವಾಗುವ ನಿರೀಕ್ಷೆ: ಆರೋಗ್ಯ ಸಚಿವ ಮಾಂಡವಿಯಾ

ನವದೆಹಲಿ: ಮಕ್ಕಳಿಗೆ ಕೋವಿಡ್ -19 ಲಸಿಕೆ ಆಗಸ್ಟ್‌ನಿಂದ ದೇಶದಲ್ಲಿ ಲಭ್ಯವಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮನ್ಸುಖ್ ಮಾಂಡವಿಯಾ ಮಾಹಿತಿ ನೀಡಿದರು.
ಕಳೆದ ವಾರ, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಅವರು ಮಕ್ಕಳ ಮೇಲೆ ಭಾರತ್ ಬಯೋಟೆಕ್ನ ಕೊವಾಕ್ಸಿನ್ ಪ್ರಯೋಗಗಳು ನಡೆಯುತ್ತಿವೆ ಮತ್ತು ಸೆಪ್ಟೆಂಬರ್ ವೇಳೆಗೆ ಫಲಿತಾಂಶಗಳನ್ನು ನಿರೀಕ್ಷಿಸಲಾಗಿದೆ. .
ಪ್ರಸ್ತುತ, ದೆಹಲಿ ಏಮ್ಸ್‌ ನಲ್ಲಿ 2-6 ವರ್ಷ ವಯಸ್ಸಿನ ಮಕ್ಕಳ ಮೇಲೆ ಕೋವಾಕ್ಸಿನ್ ಪ್ರಯೋಗಗಳು ನಡೆಯುತ್ತಿವೆ. ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಲಭ್ಯವಾಗಲಿದೆ ಎಂದು ಹೇಳಿದ್ದರು.
ಮಕ್ಕಳಲ್ಲಿ ಕೋವಿಡ್ -19 ವ್ಯಾಸಿನ್ ಪ್ರಯೋಗಗಳು ಯಾವಾಗ?
ಜೂನ್ 7 ರಂದು ದೆಹಲಿ ಏಮ್ಸ್ ಕೋವಿಡ್ -19 ಲಸಿಕೆಯ ಪ್ರಯೋಗಗಳಿಗಾಗಿ 2 ರಿಂದ 17 ವರ್ಷದೊಳಗಿನ ಮಕ್ಕಳನ್ನು ಪರೀಕ್ಷಿಸಲು ಪ್ರಾರಂಭಿಸಿತು. ಮೇ 12 ರಂದು, ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಕೋವಾಕ್ಸಿನ್‌ನ ಹಂತ 2, ಹಂತ 3 ಪ್ರಯೋಗಗಳನ್ನು ನಡೆಸಲು ಡಿಸಿಜಿಐ ಭಾರತ್ ಬಯೋಟೆಕ್‌ಗೆ ಅನುಮತಿ ನೀಡಿತು.
ಮಕ್ಕಳನ್ನು ಅವರ ವಯಸ್ಸಿನ ಪ್ರಕಾರ ವರ್ಗಗಳಾಗಿ ವಿಂಗಡಿಸುವ ಮೂಲಕ ಪ್ರಯೋಗವನ್ನು ನಡೆಸಲಾಗುತ್ತದೆ, ಇದರಲ್ಲಿ ಪ್ರತಿ ವಯಸ್ಸಿನ 175 ಮಕ್ಕಳನ್ನು ಸೇರಿಸಲಾಗಿದೆ. ಎರಡನೇ ಡೋಸ್ ಪೂರ್ಣಗೊಂಡ ನಂತರ ಮಧ್ಯಂತರ ವರದಿಯನ್ನು ಬಿಡುಗಡೆ ಮಾಡಲಾಗುವುದು, ಇದು ಮಕ್ಕಳಿಗೆ ಲಸಿಕೆ ಎಷ್ಟು ಸುರಕ್ಷಿತವಾಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಕೊವಾಕ್ಸಿನ್ ಜೊತೆಗೆ, ಮಕ್ಕಳಿಗೆ ಜೈಡಸ್ ಕ್ಯಾಡಿಲಾ ಅವರ ಲಸಿಕೆಯ ಪ್ರಯೋಗಗಳು ಪ್ರಸ್ತುತ ದೇಶದಲ್ಲಿ ನಡೆಯುತ್ತಿವೆ.

ಪ್ರಮುಖ ಸುದ್ದಿ :-   ಪರೀಕ್ಷೆಯಲ್ಲಿ ಫೇಲ್‌ ಆದ್ರೂ 2 ವರ್ಷ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ ಮಹಿಳೆ..! ಸಬ್-ಇನ್ಸ್‌ಪೆಕ್ಟರ್ ಆಗಿ‌ ಪೋಸ್‌...!!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement