ಅಧಿಕಾರಿಗಳ ಜೊತೆಗೆ ಇಂದು ನೂತನ ಸಿಎಂ ಬೊಮ್ಮಾಯಿ ಸಭೆ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಬಳಿಕ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ.
ಬುಧವಾರ ಬೆಳಿಗ್ಗೆ ಬಸವರಾಜ ಬೊಮ್ಮಾಯಿ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಶ್ರೀ ಮಾರುತಿ ಮಂದಿರಕ್ಕೆ ನಿಯೋಜಿತ ಮುಖ್ಯಮಂತ್ರಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಮಾಜಿ ಸಚಿವ ಭೈರತಿ ಬಸವರಾಜ, ಕೊಳ್ಳೇಗಾಲದ ಶಾಸಕ ಎನ್. ಮಹೇಶ್ ಮುಂತಾದವರು ನಿಯೋಜಿತ ಮುಖ್ಯಮಂತ್ರಿಗಳ ಜೊತೆಗಿದ್ದಾರೆ. ರಾಜಭವನದಲ್ಲಿ 11 ಗಂಟೆಗೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
ಮಾಧ್ಯಮಗಳ ಜೊತೆ ಮಾತನಾಡಿ ಬಸವರಾಜ ಬೊಮ್ಮಾಯಿ, “ಪ್ರಮಾಣ ವಚನ ಸಮಾರಂಭದ ಬಳಿಕ ಸಚಿವ ಸಂಪುಟ ಸಭೆ ನಡೆಸಲಿದ್ದೇನೆ. ಬಳಿಕ ರಾಜ್ಯದ ಪ್ರವಾಹ ಮತ್ತು ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದೇನೆ” ಎಂದರು.
ಸಂಪುಟ ಸಭೆ ನಡೆಸಿ, ಹಿರಿಯ ಅಧಿಕಾರಿಗಳೊಂದಿಗೆ ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿ ಬಗ್ಗೆ ಚರ್ಚಿಸಲಾಗುವುದು. ಯೋಜನೆ ಅನುಷ್ಠಾನ, ಉತ್ತಮ ಆಡಳಿತ ನೀಡುವತ್ತ ಗಮನಹರಿಸುತ್ತೇನೆ. ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದೇನೆ ಎಂದು ಹೇಳಿದ್ದಾರೆ.
ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮಂಗಳವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಾರೆ. ರಾಜಭವನದಲ್ಲಿ 11 ಗಂಟೆಗೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ.ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ನಡೆಯುವ ನಿರೀಕ್ಷೆ ಇದೆ.
ಜುಲೈ 26ರಂದು ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ಹೈಕಮಾಂಡ್ ನಾಯಕರು ಮಂಗಳವಾರ ರಾಜ್ಯಕ್ಕೆ ಆಗಮಿಸಿ, ಶಾಸಕಾಂಗ ಪಕ್ಷದ ಸಭೆ ನಡೆಸಿತ್ತು. ಬಸವರಾಜ ಬೊಮ್ಮಾಯಿ ಸರ್ವಾನುಮತದಿಂದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement