ಕರ್ನಾಟಕ ಸೇರಿ ದೇಶದ ೫ ರಾಜ್ಯದಲ್ಲಿ ಮಾಜಿ ಸಿಎಂ ಮಕ್ಕಳೇ ಈಗ ಸಿಎಂ..!

ಬೆಂಗಳೂರು: ಆಗಸ್ಟ್ ೧೯೮೮ ರಿಂದ ಏಪ್ರಿಲ್ ೧೯೮೯ರ ವರೆಗೆ ಎಸ್.ಆರ್. ಬೊಮ್ಮಾಯಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಇದೀಗ ಅವರ ಪುತ್ರ ಬಸವರಾಜ ಬೊಮ್ಮಾಯಿ ಕೈಗೆ ಕರ್ನಾಟಕದ ಅಧಿಕಾರದ ಚುಕ್ಕಾಣಿ ನೀಡಲಾಗಿದೆ. ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗೋ ಮೂಲಕ  ಭಾರತದ ೫ ರಾಜ್ಯಗಳಲ್ಲಿ ಸಿಎಂ ಪುತ್ರರೇ ಸಿಎಂ ಆಗಿರುವುದು ವಿಶೇಷವಾಗಿದೆ.

ತಮಿಳುನಾಡು:

ತಮಿಳುನಾಡಿನಲ್ಲಿ ಸದ್ಯ ಎಂಕೆ ಸ್ಟಾಲಿನ್ ಮುಖ್ಯಮಂತ್ರಿಯಾಗಿದ್ದಾರೆ. ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಎಂಕೆ ಸ್ಟಾಲಿನ್ ತಮಿಳುನಾಡು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸ್ಟಾಲಿನ್ ತಮಿಳುನಾಡಿ ಅತ್ಯಂತ ಜನಪ್ರಿಯ, ಪ್ರಭಾವಿ ಮುಖ್ಯಮಂತ್ರಿ, ದಿವಗಂತ ಎಂ ಕರುಣಾನಿಧಿ ಪುತ್ರ. ಕರುಣಾನಿಧಿ ೫ ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ.

ಆಂಧ್ರ ಪ್ರದೇಶ:

ಆಂಧ್ರ ಪ್ರದೇಶದಲ್ಲಿ ಸದ್ಯ ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾಗಿದ್ದಾರೆ. ಮೇ ೩೦, ೨೦೧೯ರಲ್ಲಿ ಜಗನ್ ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಜಗನ್ ಮೋಹನ್ ರೆಡ್ಡಿ ಆಂಧ್ರ ಪ್ರದೇಶ ಕಂಡ ಅತ್ಯಂತ ಯಶಸ್ವಿ ಮುಖ್ಯಮಂತ್ರಿ ಬಿಎಸ್ ರಾಜಶೇಖರ ರೆಡ್ಡಿ ಪುತ್ರ. ರಾಜಶೇಕರ್ ರೆಡ್ಡಿ ೨೦೦೪ರಿಂದ ೨೦೦೯ರ ವರೆಗೆ ಎರಡು ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಭಾರತದ ಆಪರೇಷನ್ ಸಿಂಧೂರ ದಾಳಿಯಲ್ಲಿ ಈ ಐವರು ನೊಟೊರಿಯಸ್‌ ಭಯೋತ್ಪಾದಕರ ಹತ್ಯೆ ; ಆದ್ರೆ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡಿದ ಪಾಕ್‌..!

ಒಡಿಶಾದಲ್ಲಿ ನವೀನ್ ಪಟ್ನಾಯಕ್ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದಾರೆ. ಒಡಿಶಾದಲ್ಲಿ ನವೀನ್ ಪಟ್ನಾಯಕ್ ಅಪ್ಪನನ್ನೇ ಮೀರಿಸಿದ ಸಿಎಂ ಆಗಿದ್ದಾರೆ. ನವೀನ್ ಪಟ್ನಾಯಕ್ ೫ನೇ ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದಾರೆ. ಇನ್ನು ನವೀನ್ ಪಟ್ನಾಯಕ್ ತಂದೆ ಬಿಜು ಪಟ್ನಾಯಕ್ ೧೯೬೧-೧೯೬೩ ಹಾಗೂ ೧೯೯೦-೯೫ರಲ್ಲಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ.

ಜಾರ್ಖಂಡ್:

ಜಾರ್ಖಂಡ್ ರಾಜ್ಯದ ಮುಖ್ಯಮಂತ್ರಿ ಹೇಮಂತ್ ಸೊರೆನ್ ೨ನೇ ಬಾರಿಗೆ ಸಿಎಂ ಆಗಿ ಆಡಳಿತ ನಡೆಸುತ್ತಿದ್ದಾರೆ. ೨ನೇ ಅವಧಿ ೨೦೧೯ರಲ್ಲಿ ಆರಂಭಗೊಂಡಿದೆ. ಹೇಮಂತ್ ಸೊರನೆ ತಂದೆ ಶಿಬು ಸೊರೆನ್ ೨ ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ.

ದೇಶದ ಒಟ್ಟು ೫ ರಾಜ್ಯಗಳಲ್ಲಿ ಸಿಎಂ ಮಕ್ಕಳೇ ಸಿಎಂ ಆಗಿ ಆಡಳಿತ ನಡೆಸುತ್ತಿದ್ದಾರೆ.

ಅಪ್ಪ-ಮಕ್ಕಳು ಸಿಎಂ ಆಗಿರುವುದು ಉದಾಹರಣೆಗಳು ಇನ್ನೂ ಇವೆ. ಕರ್ನಾಟಕದಲ್ಲಿ ಹೆಚ್.ಡಿ. ದೇವೇಗೌಡ ಹಾಗೂ ಹೆಚ್.ಡಿ. ಕುಮಾರಸ್ವಾಮಿ, ಉತ್ತರ ಪ್ರದೇಶದಲ್ಲಿ ಮುಲಾಯಂ ಸಿಂಗ್ ಯಾದವ್ ಹಾಗೂ ಅಖಿಲೇಶ್ ಯಾದವ್, ಜಮ್ಮು ಕಾಶ್ಮೀರದಲ್ಲಿ ಫಾರುಖ್ ಅಬ್ದುಲ್ಲಾ ಹಾಗೂ ಓಮರ್ ಅಬ್ದುಲ್ಲಾ, ಮುಫ್ತಿ ಮೊಹಮ್ಮದ್ ಸಯ್ಯಿದ್ ಹಾಗೂ ಪುತ್ರಿ ಮೆಹಬೂಬಾ ಮುಫ್ತಿ ಸಿಎಂ ಆಗಿ ಆಡಳಿತ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಒಳ್ಳೆಯ ಸುದ್ದಿ...| ಈ ವರ್ಷ ವಾಡಿಕೆಗಿಂತ ಮೊದಲೇ ಆಗಮಿಸಲಿದೆ ಮುಂಗಾರು ಮಳೆ...

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement