ನೂತನ ಸಿಎಂ ಬೊಮ್ಮಾಯಿ ಸಚಿವ ಸಂಪುಟ ಸೇರಲ್ಲ ಎಂದ ಜಗದೀಶ ಶೆಟ್ಟರ

posted in: ರಾಜ್ಯ | 1

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರುವುದಿಲ್ಲ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.
ನಾನು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಆಗಿರುವುದರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಬಿ.ಎಸ್. ಯಡಿಯೂರಪ್ಪ ಜೊತೆ ಕೆಲಸ ಮಾಡಿರುವುದರಿಂದ ಹೀಗೆ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ
ಹಿಂದೆ ನಾನು ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿದ್ದೇನೆ. ತಳಮಟ್ಟದಿಂದ ಮೇಲ್ಮಟ್ಟದವರೆಗೂ ಕೆಲಸ ಮಾಡಿದ್ದೇನೆ. ಮುಂದೆ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ವರಿಷ್ಠರು ಜವಾಬ್ದಾರಿ ಕೊಟ್ಟರೆ ನಿರ್ವಹಿಸುತ್ತೇನೆ ಎಂದು ಅವರು  ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋಕ್ಕೂ ನನ್ನ ನಿರ್ಧಾರಕ್ಕೂ ಸಂಬಂಧವಿಲ್ಲ. ನೈತಿಕ ಕಾರಣದಿಂದ ನಾನು ಸಂಪುಟಕ್ಕೆ ಸೇರುವುದಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರ. ಇದನ್ನು ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಗಮನಕ್ಕೆ ತಂದಿದ್ದೇನೆ.ಇದು ನನ್ನ ವೈಯಕ್ತಿಯ ನಿರ್ಧಾರವಾಗಿದ್ದು, ಹೈಕಮಾಂಡ್ ನಿಂದ ಯಾವುದೇ ಸಂದೇಶ ಬಂದಿಲ್ಲ. ನನ್ನ ಅಭಿಪ್ರಾಯವನ್ನು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಹೈಕಮಾಂಡ್ ಗೆ ತಂದಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಜಗದೀಶ್ ಶೆಟ್ಟರ್​ ಅವರು 2004 ರ ವಿದಾನಸಭೆ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸೋಲಿಸಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

  1. ದ ಕೆ Kulkarni

    ಗೌರವ ಯುತ ನಿರ್ಧಾರ ದಿಂದ ಗೌರವ ಮತ್ತು ಜನ ಪ್ರಿಯತೆ ಹೆಚ್ಚುತ್ತದೆ ಆದರೂ ಧಾರವಾಡ ಜಿಲ್ಲೆ ಅದರಲ್ಲೂ ಆಹಾನಗರದಲ್ಲಿ ಆಗಬೇಕಾದ ಕೇಲ ಸ ಗಳು ಬೇಕಾದಸ್ಟಿದೂ ತಮ್ಮ ಸೇವೆ ಅಗತ್ತ್ಯ ವಿದೆ ಡಿ. ಕೆ. ಕುಲಕರ್ಣಿ

ನಿಮ್ಮ ಕಾಮೆಂಟ್ ಬರೆಯಿರಿ