ಭಾರತದಲ್ಲಿ 2.87 ಕೋಟಿ ಡೋಸ್ ಲಸಿಕೆ ಇನ್ನೂ ಬಳಕೆಯಾಗಬೇಕಿದೆ

ನವದೆಹಲಿ: ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 193 ದಿನಗಳೇ ಕಳೆದಿದ್ದು, ಈವರೆಗೂ 44 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಮಂಗಳವಾರ ರಾತ್ರಿ 7 ಗಂಟೆ ವರೆಗೆ ಒಂದೇ ದಿನ 36,87,239 ಫಲಾನುಭವಿಗಳಿಗೆ ಕೊರೊನಾ ವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 44,58,39,699 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.
ಕೇಂದ್ರ ಸರ್ಕಾರದಿಂದ ಈವರೆಗೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಷ್ಟು ಡೋಸ್ ಲಸಿಕೆ ಪೂರೈಕೆ ಆಗಿದೆ. ಎಷ್ಟು ಡೋಸ್ ಕೊವಿಡ್-19 ಲಸಿಕೆ ಬಾಕಿ ಉಳಿದಿದೆ. ಎಷ್ಟು ಡೋಸ್ ಲಸಿಕೆ ವ್ಯರ್ಥವಾಗಿದೆ. ದೇಶದಲ್ಲಿ ಅನುಮೋದನೆ ಪಡೆದಿರುವ ಲಸಿಕೆಗಳು ಯಾವುವು ಎಂದು ಕೇಂದ್ರ ಸರಕಾರ ಮಾಹಿತಿ ನೀಡಿದೆ.
2021ರ ಜುಲೈ 27ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ 45,37,70,580 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ
ಪೂರೈಕೆಯಾದ ಲಸಿಕೆ ಪ್ರಮಾಣ – 45,73,30,110
ಬಳಕೆ ಆಗಿರುವ ಲಸಿಕೆ ಪ್ರಮಾಣ – 43,80,46,844
ಕೊವಿಡ್-19 ಲಸಿಕೆಯ ಲಭ್ಯತೆ – 2,28,27,959
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಕೊರೊನಾವೈರಸ್ ಲಸಿಕೆಯ ಶೇ.75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಕಂಪನಿಗಳಿಂದ ನೇರವಾಗಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಲಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬರಿಗೆ ಕೊವಿಡ್-19 ಲಸಿಕೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.

ಪ್ರಮುಖ ಸುದ್ದಿ :-   ಸಿಬಿಐ ಜಂಟಿ ನಿರ್ದೇಶಕರಾಗಿ ಐವರು ಡಿಐಜಿಗಳನ್ನು ನೇಮಕ ಮಾಡಿದ ಕೇಂದ್ರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement