ಸಿಎಂ ಆಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

ಬೆಂಗಳೂರು: ಬಸವರಾಜ ಬೊಮ್ಮಾಯಿ ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬೊಮ್ಮಾಯಿ ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕಾರ್ಯಕ್ರಮ ನಡೆಸಿಕೊಟ್ಟರು. ಬಳಿಕ ನೂತನ ಮುಖ್ಯಮಂತ್ರಿ ಕಡತಕ್ಕೆ ಸಹಿ ಹಾಕಿದರು. ನಂತರ ರಾಜ್ಯಪಾಲ ಗೆಹ್ಲೋಟ್ ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಇಂದಿನಿಂದ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಕಾರ್ಯಭಾರ ಶುರುವಾಗಲಿದೆ.

ಪ್ರಮಾಣವಚನ ಸ್ವೀಕರಿಸುವ ಮೊದಲು, ಬಸವರಾಜ್ ಬೊಮ್ಮಾಯಿ ಅವರು ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪಾದ ಮುಟ್ಟಿ ನಮಸ್ಕರಿಸಿದರು ಮತ್ತು ಹೊಸ ಅವಧಿಗೆ ಅವರ ಆಶೀರ್ವಾದವನ್ನು ಕೋರಿದರು.
ಬೊಮ್ಮಾಯಿ ಕುಟುಂಬಸ್ಥರು ಸಹ ಉಪಸ್ಥಿತರಿದ್ದರು. ನೂತನ ಮುಖ್ಯಮಂತ್ರಿಗೆ ಜೈಕಾರ, ಘೋಷಣೆಗಳು ಮೊಳಗಿದವು.  ರಾಜಭವನ ಸುತ್ತ ಬಿಗಿಬಂದೋಬಸ್ತ್​ ಏರ್ಪಡಿಸಲಾಗಿತ್ತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement