ಬಣ್ಣಿಸಲು ಪದಗಳಿಲ್ಲ : ಬಿಎಸ್ ವೈ ಕೊಂಡಾಡಿದ ಪ್ರಧಾನಿ ಮೋದಿ

ನವದೆಹಲಿ : ರಾಜ್ಯದ ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಯಡಿಯೂರಪ್ಪ ಅವರನ್ನು ಹೊಗಳಿ ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ. ಯಡಿಯೂರಪ್ಪನವರು ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ರೀತಿ ಅವಿಸ್ಮರಣೀಯ.ಕರ್ನಾಟಕದಲ್ಲಿ ಪಕ್ಷದ ಅಭಿವೃದ್ಧಿಗೆ ಯಡಿಯೂರಪ್ಪ ಕೊಡುಗೆ ಬಣ್ಣಿಸಲು ಪದಗಳಿಲ್ಲ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ಕೊಂಡಾಡಿದ್ದಾರೆ.
ಬಿ.ಎಸ್. ಯಡಿಯೂರಪ್ಪ ದಶಕಗಳ ಕಾಲ ಶ್ರಮಿಸಿ ರಾಜ್ಯದ ಮೂಲೆ ಮೂಲೆಗೂ ಸುತ್ತಾಡಿ, ಜನರನ್ನು ಒಂದೆಡೆ ಸೇರಿಸಿ ಬಿಜೆಪಿ ಕಟ್ಟಿ ಬೆಳೆಸಿದ್ದು ಸ್ಮರಣೀಯ.ಯಡಿಯೂರಪ್ಪನವರಿಗೆ ಪಕ್ಷದ ಮೇಲಿನ ನಿಷ್ಠೆ, ಸಮಾಜ ಕಲ್ಯಾಣಕ್ಕಾಗಿ ಅವರ ಬದ್ಧತೆ ಮೆಚ್ಚಲೇಬೇಕು ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹುಬ್ಬಳ್ಳಿ: ಸ್ಕೂಟಿಯಲ್ಲಿ ಹೋಗುವಾಗ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಮಹಿಳೆ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement