ಕೇಂದ್ರದ ಮಹತ್ವದ ನಿರ್ಧಾರ.. ವೈದ್ಯಕೀಯ ಸೀಟು: ಒಬಿಸಿಗೆ ಶೇ. 27, ಆರ್ಥಿಕ ದುರ್ಬಲ ವರ್ಗಕ್ಕೆ ಶೇ. 10 ಮೀಸಲಾತಿ ಪ್ರಕಟ

ನವದೆಹಲಿ: 2021-22ನೇ ಸಾಲಿನ ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಅಖಿಲ ಭಾರತ ಕೋಟಾದಲ್ಲಿ ಒಬಿಸಿಗಳಿಗೆ ಶೇ. 27 ಮತ್ತು ಆರ್ಥಿಕ ದುರ್ಬಲ ವರ್ಗಕ್ಕೆ(ಇಡಬ್ಲ್ಯೂಎಸ್) ಶೇ. 10 ರಷ್ಟು ಮೀಸಲಾತಿಯನ್ನು ಸರ್ಕಾರ ಗುರುವಾರ ಪ್ರಕಟಿಸಿದೆ.
ಕಳೆದ ಸೋಮವಾರ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೀರ್ಘಕಾಲದಿಂದ ಬಾಕಿ ಇರುವ ಈ ಸಮಸ್ಯೆಗೆ ಪರಿಣಾಮಕಾರಿ ಪರಿಹಾರ ನೀಡುವಂತೆ ಸಂಬಂಧಪಟ್ಟ ಕೇಂದ್ರ ಸಚಿವಾಲಯಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸರ್ಕಾರದ ಈ ನಿರ್ಧಾರದಿಂದ ಎಂಬಿಬಿಎಸ್ ನಲ್ಲಿ ಸುಮಾರು 1,500 ಮತ್ತು ಸ್ನಾತಕೋತ್ತರ ಪದವಿಯಲ್ಲಿ 2,500 ಒಬಿಸಿ ವಿದ್ಯಾರ್ಥಿಗಳಿಗೆ ಸೀಟು ಪಡೆಯುವ ಅವಕಾಶ ಸಿಗಲಿದೆ. ಇನ್ನು ಇಡಬ್ಲ್ಯೂಎಸ್ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ನಲ್ಲಿ ಸುಮಾರು 550 ಮತ್ತು ಸ್ನಾತಕೋತ್ತರ ಪದವಿಯಲ್ಲಿ ಸುಮಾರು 1,000 ಸೀಟುಗಳು ಲಭ್ಯವಾಗಲಿವೆ” ಎಂದು ಪ್ರಕಟಣೆ ತಿಳಿಸಿದೆ.
ಎಐಕ್ಯೂ ಯೋಜನೆಯಲ್ಲಿ ಒಬಿಸಿಗಳಿಗೆ ಶೇ. 27 ಮತ್ತು ಇಡಬ್ಲ್ಯೂಎಸ್‌ ಗೆ ಶೇ. 10 ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ “ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಪ್ರಮುಖ ಸುದ್ದಿ :-   ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತದ ಸೇನೆ ಬಗ್ಗೆ ಪಾಕಿಸ್ತಾನಕ್ಕೆ ಚೀನಾ ಲೈವ್‌ ಮಾಹಿತಿ ನೀಡುತ್ತಿತ್ತು ; ಉನ್ನತ ಸೇನಾ ಜನರಲ್

ಅಖಿಲ ಭಾರತ ಕೋಟಾ (ಎಐಕ್ಯೂ) ಅಡಿಯಲ್ಲಿ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಗೆ 15% ಮತ್ತು ಪರಿಶಿಷ್ಟ ಪಂಗಡಗಳ (ST ) ವಿದ್ಯಾರ್ಥಿಗಳಿಗೆ ಈಗಾಗಲೇ 7.5% ಮೀಸಲಾತಿ ನೀಡಲಾಗುತ್ತದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement