ಹುಬ್ಬಳ್ಳಿ-ಧಾರವಾಡ ಉತ್ತುಂಗಕ್ಕೆ ಒಯ್ಯುವೆ ಎಂದು ಭರವಸೆ, ಶೆಟ್ಟರ ಜೊತೆ ಮಾತನಾಡುವೆ ಎಂದ ಸಿಎಂ ಬೊಮ್ಮಾಯಿ

posted in: ರಾಜ್ಯ | 0

ಹುಬ್ಬಳ್ಳಿ: ಹುಬ್ಬಳ್ಳಿ ನನ್ನ ಪ್ರೀತಿಯ ಸ್ಥಳ. ನನ್ನ ಎಲ್ಲ ಶಿಕ್ಷಣ ಮುಗಿದಿದ್ದು ಇಲ್ಲಿಯೇ. ಮುಖ್ಯಮಂತ್ರಿಯಾಗಿ ನಾನು‌ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ ಎಂದು ಕರ್ನಾಟಕದ ನೂತನ ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಹುಬ್ಬಳ್ಳಿಯನ್ನು ಹೀಗೆ ನೆನಪಿಸಿಕೊಂಡರು.
ಕರ್ನಾಟಕದ ನೂತನ ಮುಖ್ಯಮಂತ್ರಿಯಾದ ನಂತರ ಹುಬ್ಬಳ್ಳಿಗೆ ಪ್ರಪ್ರಥಮವಾಗಿ ಆಗಮಿಸಿದ ನಂತರ ಅವರು ಗುರುವಾರ ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ರಾಜ್ಯದ ಎರಡನೇ ಅತಿದೊಡ್ಡ ನಗರ. ಹುಬ್ಬಳ್ಳಿ -ಧಾರವಾಡವನ್ನ ರಾಜ್ಯದಲ್ಲಿ ಉತ್ತುಂಗಕ್ಕೆ‌ ಕೊಂಡೊಯ್ಯುವೆ ಎಂದು ಭರವಸೆ ನೀಡಿದರು.
ಜಗದೀಶ್ ಶೆಟ್ಟರ್ ಸಂಪುಟ ಸೇರುವುದಿಲ್ಲ ಎಂಬ ಹೇಳಿಕೆ‌ ವಿಚಾರವಾಗಿ ಮಾತನಾಡಿದ ಅವರು, ಈ ಕುರಿತು ಜಗದೀಶ ಶೆಟ್ಟರ ಅವರ ಜೊತೆ ಪೋನ್ ನಲ್ಲಿ ಮಾತನಾಡಿದ್ದೇನೆ. ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅವರನ್ನು ಖುದ್ದಾಗಿ ಭೇಟಿಯಾಗಿ ಮತ್ತೊಮ್ಮೆ ಮಾತನಾಡುವೆ ಎಂದು ತಿಳಿಸಿದರು.
ಜಗದೀಶ್ ಶೆಟ್ಟರ ಹಾಗೂ ನಾನು ಆತ್ಮೀಯ ಸ್ನೇಹಿತರು, ಬೇರೆ ಪಕ್ಷದಲ್ಲಿ ಇದ್ದಾಗಲೂ ನಮ್ಮ ನಡುವೆ ಉತ್ತಮ ಬಾಂಧವ್ಯ ಇದೆ.
ನಾವು ಇನ್ನೂ ರಾಜಕೀಯಕ್ಕೆ ಬಂದಿರಲಿಲ್ಲ, ಆಗಿನಿಂದಲೂ ನಾವಿಬ್ಬರು ಒಳ್ಳೆಯ ಸ್ನೇಹಿತರು ಎಂದು ಬೊಮ್ಮಾಯಿ ಹೇಳಿದರು.

advertisement

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಇದೀಗ ಗದಗದಲ್ಲಿ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಕರ್ನಾಟಕಕ್ಕೆ ಭಾರತ್ ಜೋಡೋ ಯಾತ್ರೆ ಪ್ರವೇಶಕ್ಕೂ ಮುನ್ನ ರಾಹುಲ್ ಗಾಂಧಿ ಪೋಸ್ಟರ್‌ಗಳನ್ನೇ ಹರಿದ ಕಿಡಿಗೇಡಿಗಳು..

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement