ಕೃಷ್ಣಾ ಮೇಲ್ದಂಡೆ ಸೇರಿದಂತೆ ಉತ್ತರ ಕರ್ನಾಟಕ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ:ಬೊಮ್ಮಾಯಿ

ಹುಬ್ಬಳ್ಳಿ: ಕೃಷ್ನಾ ಮೇಲ್ದಂಡೆ ಯೋಜನೆ ಸೇರಿದಂತೆ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಜಾರಿಗೆ ನನ್ನ ಸರ್ಕಾರ ಬದ್ಧ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಹುಬ್ಬಳ್ಳಿ ಗೋಕುಲ ರಸ್ತೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ನಾ ಮೇಲ್ದಂಡೆ ಯೋಜನೆ ಸೇರಿದಂತೆ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಬಗ್ಗೆ ನನಗೆ ಸ್ಪಷ್ಟವಾದ ಮಾಹಿತಿಯಿದೆ. ಇದರಿಂದ ಲಕ್ಷಾಂತರ ಎಕರೆ ಭೂಮಿ ನೀರಾವರಿಗೆ ಒಳಪಡಲಿದೆ. ಹೀಗಾಗಿ ಕೃಷ್ಣ ಮೇಲ್ದಂಡೆ ಯೋಜನೆ ಸೇರಿದಂತೆ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಜಾರಿಗೆ ಪ್ರಾಶಸ್ತ್ಯ ನೀಡುತ್ತೇನೆ ಎಂದು ಅವರು ಹೇಳಿದರು.
ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಸೇರಿದಂತೆ ಹಲವು ಹಿರಿಯರು, ಶಾಸಕರು, ಮುಖಂಡರು ಇದ್ದಾರೆ. ಎಲ್ಲರೊಂದಿಗೆ ಚರ್ಚಿಸಿ ಸಲಹೆ ಸ್ವೀಕರಿಸುತ್ತೇನೆ. ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ ಎಂದು ಅವರು ಹೇಳಿದರು.
ಹೈಕಮಾಂಡ್‌ ನಿರ್ಣಯದಿಂದ ಮುಖ್ಯಮಂತ್ರಿಯಾದೆ. ಕೇಂದ್ರದ ನಾಯಕರು ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಎಲ್ಲರ ಆಶೀರ್ವಾದದಿಂದ ಉತ್ತಮ ಕೆಲಸ ಮಾಡುತ್ತೇನೆ ನಂಬಿಕೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಂತರ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಕಾರವಾರ, ಅಂಕೋಲಾ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಕಾಳಜಿ ಕೇಂದ್ರಗಳಿಗೂ ಸಹ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ಮಾಡಿದರು. ಜನಪ್ರತಿನಿಧಿಗಳು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಅಂಕೋಲಾದ ಸಭಾಭವನದಲ್ಲಿ ಸಭೆ ನಡೆಸಿ ತುರ್ತು ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement