ತವರೂರು ಹುಬ್ಬಳ್ಳಿಯಲ್ಲಿ ಒಬ್ಬಂಟಿಯಾದ ಸಿಎಂ ಬೊಮ್ಮಾಯಿ: ಚರ್ಚೆಗೆ ಗ್ರಾಸ..!

ಹುಬ್ಬಳ್ಳಿ:ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿ ಅವರಿಂದ ಸ್ವಪಕ್ಷೀಯರೇ ದೂರ ಉಳಿದ ಕಾರಣ ಮುಖ್ಯಮಂತ್ರಿಗಳು ತಮ್ಮ ತವರು ಜಿಲ್ಲೆಯಲ್ಲಿಯೇ ಏಕಾಂಗಿಯಾಗಿದ್ದಾರಾ ಎಂಬ ಅನುಮಾನ ಮೂಡುವಂತೆ ಮಾಡಿದೆ.
ಮುಖ್ಯಮಂತ್ರ ಸ್ಥಾನಕ್ಕೇರಿದ ಬಳಿಕ ಇದೇ ಮೊದಲ ಬಾರಿಗೆ ಜನಿಸಿದ ಊರಿಗೆ ಭೇಟಿ ನೀಡಿದ್ದ ಬೊಮ್ಮಾಯಿ ಆಗಮನದ ವೇಳೆ ಧಾರವಾಡ ಜಿಲ್ಲೆಯ ಬಿಜೆಪಿಯ ಬೆರಳೆಣಿಕೆ ಮುಖಂಡರು ಹಾಜರಿದ್ದಿದ್ದು ಬಿಟ್ಟರೆ ಬಹುತೇಕರು ದೂರವೇ ಉಳಿದಿದ್ದು ಮುಖ್ಯಮಂತ್ರಿ ಬೊಮ್ಮಾಯಿ ಪ್ರತಮ ಭೇಟಿ ಸಂದರ್ಭದಲ್ಲಿ ಬಿಜೆಪಿ ನಾಯಕರು ದೂರ ಉಳಿಯಲು ಕಾರಣವೇನು..? ಯಾಕೆ ಅಂತರ ಕಾಯ್ದುಕೊಂಡರು ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ.
ಮುಖ್ಯಮಂತ್ರಿಗಳ ಜೊತೆಗೆ ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಲಿಂಗರಾಜ ಪಾಟೀಲ ಸೇರಿದಂತೆ ಬೆರಳೆಣಿಕೆ ಬಿಜೆಪಿ ನಾಯಕರು ಹಾಗೂ ಜನಪ್ರತಿನಿಧಿಗಳು ಮಾತ್ರ ಕಾಣಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಹುಬ್ಬಳ್ಳಿ-ಧಾರವಾಡ ಪಶ್ಚಿಮ‌ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ, ಕಲಘಟಗಿ ಶಾಸಕ ನಿಂಬಣ್ಣನವರ, ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರು,ಪ್ರದೀಪ ಶೆಟ್ಟರ, ಹುಡಾ ಅಧ್ಯಕ್ಷ ನಾಗೇಶ ಕಲ್ಬುರ್ಗಿ  ಸೇರಿದಂತೆ ಜಿಲ್ಲೆಯ ಬಹುತೇಕ ಬಿಜೆಪಿ ಮುಖಂಡರು, ಕಾರ್ಯಕರ್ತರು ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ ದೂರ ಉಳಿದಿದ್ದರು. ಇದು ಕಾಕತಾಳೀಯವೋ ಅಥವಾ ಮಾಹಿತಿ ಇಲ್ಲವೋ ಅಥವಾ ಅಸಮಾಧಾನವೋ ಎಂಬುದು ಈಗ ಚರ್ಚೆಗೆ ಕಾರಣವಾಗಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ, ಸಭಾಪತಿ ಬಸವರಾಜ ಹೊರಟ್ಟಿ ಾವರು ನೂತನ ಮುಖ್ಯಮಂತ್ರಿ ಅವರಿಗೆ ಶುಭ ಕೋರಿದರು. ಇದಲ್ಲದೇ ಬೊಮ್ಮಾಯಿ ಅಭಿಮಾನಿಗಳು, ಶಿಗ್ಗಾಂವಿ- ಸವಣೂರು ಹಾಗೂ ಹಾವೇರಿ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು. ಆದರೆ ಹುಬ್ಬಳ್ಳಿಯ ಬಿಜೆಪಿ ಪದಾಧೀಕಾರಿಗಳಾಗಲಿ, ನಿಗಮ ಮಂಡಳಿಗಳ ಅಧ್ಯಕ್ಷರಾಗಲಿ ಹಾಜರಿರಲಿಲ್ಲ. ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವನಾಗಲು ಇಷ್ಟಪಡುವುದಿಲ್ಲ ಎಂದು ಜಗದೀಶ ಶೆಟ್ಟರ್ ಹೇಳಿಕೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ನೂತನ ಮುಖ್ಯಮಂತ್ರಿ ಏಕಾಂಗಿಯಾಗಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement