7 ಕೋಟಿ ದಾಟಿದ ಮೋದಿ ಟ್ವಿಟರ್ ಫಾಲೋವರ್ಸ್ ಸಂಖ್ಯೆ, ಒಂದೇ ವರ್ಷದಲ್ಲಿ ಒಂದು ಕೋಟಿ​ ಹೆಚ್ಚಳ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್​ ಅಕೌಂಟ್ನಲ್ಲಿ ಫಾಲೋವರ್ಸ್ ಸಂಖ್ಯೆ 7 ಕೋಟಿ (70 ಮಿಲಿಯನ್​) ದಾಟಿದ್ದು, ಇದು ಹೊಸ ಮೈಲಿಗಲ್ಲಾಗಿದೆ.
ಈ ಮೂಲಕ ಸಾಮಾಜಿಕ ಜಾಲತಾಣ ಗಳಲ್ಲಿ ಅತಿಹೆಚ್ಚು ಅನುಯಾಯಿಗಳನ್ನು ಹೊಂದಿರುವ ಜಾಗತಿಕ ಸಕ್ರಿಯ ರಾಜಕಾರಣಿಗಳ ಪಟ್ಟಿಯಲ್ಲಿ ಮೋದಿ ಅಗ್ರಸ್ಥಾನ ಹೊಂದಿದ್ದಾರೆ. ನರೇಂದ್ರ ಮೋದಿಯವರು 2009ರಲ್ಲಿ ಗುಜರಾತ್​ ಮುಖ್ಯಮಂತ್ರಿಯಾಗಿದ್ದಾಗಿನ ಸಂದರ್ಭದಲ್ಲಿ ಟ್ವಿಟರ್​ ಬಳಕೆ ಶುರು ಮಾಡಿದ್ದರು. 2010ರ ಹೊತ್ತಿಗೆ ಲಕ್ಷಕ್ಕೂ ಅಧಿಕ ಅನುಯಾಯಿಗಳನ್ನು ಹೊಂದಿದ್ದರು. 2020ರಲ್ಲಿ ನರೇಂದ್ರ ಮೋದಿ ಟ್ವಿಟರ್​ ಅಕೌಂಟ್ ಫಾಲೋವರ್ಸ್​ ಸಂಖ್ಯೆ​ 6 ಕೋಟಿ ದಾಟಿತ್ತು.
ಅಮೆರಿಕ ಅಧ್ಯಕ್ಷರಿಗೆ 3.09 ಕೋಟಿ ಫಾಲೋವರ್ಸ್
ಅಮೆರಿಕ ಅಧ್ಯಕ್ಷ ಜೋ ಬಿಡೆನ್​ ಅವರು ಟ್ವಿಟರ್​ನಲ್ಲಿ 3.09 ಕೋಟಿ ಫಾಲೋವರ್ಸ್ ಹೊಂದಿದ್ದರೆ, ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ 12.98 ಕೋಟಿ​ ಫಾಲೋವರ್ಸ್ ಹೊಂದಿದ್ದಾರೆ. ಹಾಗೇ ಫ್ರಾನ್ಸ್​ ಅಧ್ಯಕ್ಷ ಎಮ್ಮಾನ್ಯುಯೆಲ್​ ಮಾಕ್ರೋನ್​ 71 ಲಕ್ಷ ಫಾಲೋವರ್ಸ್ ಹೊಂದಿದ್ದಾರೆ. ನಮ್ಮ ಗೃಹ ಸಚಿವ ಅಮಿತ್ ಶಾ ಅವರಿಗೆ ಟ್ವಿಟರ್​ನಲ್ಲಿ 2.63 ಕೋಟಿ ಅನುಯಾಯಿಗಳು ಇದ್ದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 1.94 ಕೋಟಿ ಫಾಲೋವರ್ಸ್ ಹೊಂದಿದ್ದಾರೆ.

ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement