ಅಳ್ತಾರೆ, ಗಂಡನ ಜೊತೆ ಜಗಳವಾಡ್ತಾರೆ ಎನ್ನುವ ಸುದ್ದಿ ಮಾನಹಾನಿ ಆಗುತ್ತಾ ?:ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿಗೆ ಕೋರ್ಟ್​ ಪ್ರಶ್ನೆ

ಮುಂಬೈ: ಪೊಲೀಸ್ ಮೂಲಗಳನ್ನು ಆಧರಿಸಿದ ವರದಿಗಳನ್ನು ದುರುದ್ದೇಶಪೂರಿತ ಮತ್ತು ಮಾನಹಾನಿಕರ ಎಂದು ಹೇಳಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಶುಕ್ರವಾರ ಹೇಳಿದೆ.
ಶಿಲ್ಪಾ ಅಳುತ್ತಿದ್ದಾರೆ, ಗಂಡನ ಜತೆ ಜಗಳವಾಡುತ್ತಿದ್ದಾರೆ ಇತ್ಯಾದಿಯಾಗಿ ಮಾನಹಾನಿಯಾಗುವಂಥ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ, ನಾನು ಅಳುವ ಫೋಟೋಗಳನ್ನು ಹಾಕುತ್ತಿದ್ದಾರೆ. ಆದ್ದರಿಂದ ನನ್ನ ಮಾನಹಾನಿಯಾಗಿದ್ದು, 25 ಕೋಟಿ ರೂಪಾಯಿ ಪರಿಹಾರ ಬೇಕು ಎಂದು ಖ್ಯಾತ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಬಾಂಬೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಅರ್ಜಿಯಲ್ಲಿ 29 ಮಾಧ್ಯಮ ಸಿಬ್ಬಂದಿ ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಆದರೆ ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಶಿಲ್ಪಾ ಶೆಟ್ಟಿಗೆ ಬುದ್ಧಿಮಾತು ಹೇಳಿದ್ದಾರೆ.
ಮಾಧ್ಯಮ ಸಿಬ್ಬಂದಿ ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ನಟಿ ಏನನ್ನು ನಿರೀಕ್ಷಿಸುತ್ತಿದ್ದಾರೋ ಅದು ಪತ್ರಿಕಾ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತದೆ ಎಂದು ಹೇಳಿದ್ದಾರೆ.
ನಾವು ಕುಳಿತುಕೊಂಡು ಪ್ರತಿಯೊಂದು ವರದಿಗಳಿಗೂ ಮಾಧ್ಯಮ ಸಂಸ್ಥೆಗಳು ಯಾವ ಮೂಲಗಳನ್ನು ಉಲ್ಲೇಖಿಸುತ್ತಿವೆ ಎಂದು ಪರಿಶೀಲಿಸಬೇಕು ಎಂದು ನೀವು ಬಯಸುತ್ತೀರಾ?” ಎಂದು ನ್ಯಾಯಾಧೀಶರು ಶಿಲ್ಪಾ ಶೆಟ್ಟಿ ಅವರ ವಕೀಲರಿಗೆ ಪ್ರಶ್ನಿಸಿದ್ದಾರೆ.
“ನೀವು ಸಾರ್ವಜನಿಕ ಜೀವನದಲ್ಲಿದ್ದರೆ ಇಂತಹ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಜನರು ನಿಮ್ಮ ಜೀವನದ ಬಗ್ಗೆ ಆಸಕ್ತರಾಗಿರುತ್ತಾರೆ. ನೀವು ಅಳುತ್ತೀರಿ ಮತ್ತು ಗಂಡನೊಂದಿಗೆ ಜಗಳವಾಡಿದ್ದೀರಿ ಎಂದು ಬರೆಯುವವರು ಹೇಗೆ ಮಾನಹಾನಿಯಾಗುತ್ತದೆ ಎಂದು ಹೈಕೋರ್ಟ್‌ ಪ್ರಶ್ನಿಸಿದೆ.
“ನೀವು ವ್ಯಕ್ತಿಗತವಾದ ಮಾನಹಾನಿ ವಿಷಯಗಳ ಬಗ್ಗೆ ಹೇಳಿ, ನಾನು ಅದನ್ನು ಪರಿಶೀಲಿಸುತ್ತೇನೆ. ಆದರೆ ಪೊಲೀಸ್ ಮೂಲಗಳನ್ನು ಆಧರಿಸಿದ ಸುದ್ದಿ ವರದಿಗಳು ದುರುದ್ದೇಶಪೂರಿತ ಮತ್ತು ಮಾನಹಾನಿಕರ ಎಂದು ಕರೆಯಲಾಗುವುದಿಲ್ಲ. ನಾನು ಏನು ಮಾಡಬೇಕೆಂದು ನೀವು ನಿರೀಕ್ಷಿಸುತ್ತಿದ್ದೀರಿ ಎಂಬುದು ಇದು ಪತ್ರಿಕಾ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ” ಎಂದು ಕೋರ್ಟ್‌ ಹೇಳಿದೆ.

ಪ್ರಮುಖ ಸುದ್ದಿ :-   ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement