ಕರ್ನಾಟಕದ ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಉಪವಾಸ

ಚೆನ್ನೈ: ಕರ್ನಾಟಕದ ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಜಟಾಪಟಿ ನಡೆಯುತ್ತಿದೆ. ತಮಿಳುನಾಡಿನ ಪ್ರತಿಪಕ್ಷ ಬಿಜೆಪಿ ಸಹ ತಮಿಳುನಾಡು ಸರ್ಕಾರಕ್ಕೆ ಬೆಂಬಲ ನೀಡಿದೆ.
ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಮೇಕೆದಾಟು ಯೋಜನೆ ವಿರೋಧಿಸಿ ಕರ್ನಾಟಕದ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ.
ಆಗಸ್ಟ್ 5ರಂದು ಕೆ. ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿ ಶಾಸಕರು, ಪಕ್ಷದ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಕರ್ನಾಟಕ ಸರ್ಕಾರ ಯೋಜನೆಯನ್ನು ಕೈಬಿಡಬೇಕು ಎಂದು ಅವರು ಆಗ್ರಹಿಸಲಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಕೆಲವು ದಿನಗಳ ಹಿಂದೆ ಸರ್ವಪಕ್ಷಗಳ ಸಭೆಯನ್ನು ನಡೆಸಿದ್ದರು. ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯದ ನಿಲುವಿನ ಬಗ್ಗೆ ಚರ್ಚೆ ನಡೆಸಿದ್ದರು. ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ನಾಯಕರು ಯೋಜನೆ ವಿಚಾರದಲ್ಲಿ ತಮಿಳುನಾಡು ಸರ್ಕಾರದ ಪರವಾಗಿ ನಿಲ್ಲುತ್ತೇವೆ ಎಂದು ಹೇಳಿದ್ದರು. ಕರ್ನಾಟಕ ಸರ್ಕಾರದ ಪ್ರಸ್ತಾವಿತ ಯೋಜನೆಯನ್ನು ವಿರೋಧಿಸಿದ್ದರು.
ಕರ್ನಾಟಕದ ಬಿಜೆಪಿ ಸರ್ಕಾರ ಕುಡಿಯುವ ನೀರು ಪೂರೈಕೆ ಮಾಡಲು ಮೇಕೆದಾಟು ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಆದರೆ ತಮ್ಮದೇ ಪಕ್ಷದ ಬೇರೆ ರಾಜ್ಯದ ನಾಯಕರು ಯೋಜನೆ ವಿರೋಧಿಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ನಮ್ಮ ಗಾಯದ ಮೇಲೆ ಉಪ್ಪು ಸವರಬೇಡಿ, ಕಸಬ್ ಹೊಗಳುವುದಿದ್ದರೆ ಪಾಕಿಸ್ತಾನಕ್ಕೆ ಹೋಗಿ": 26/11 ದಾಳಿ ಬಗ್ಗೆ ಕಾಂಗ್ರೆಸ್‌ ನಾಯಕನ ಹೇಳಿಕೆಗೆ ಕಸಬ್ ವಿಚಾರಣೆ ಸಾಕ್ಷಿಯ ಆಕ್ಷೇಪ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement