ರಾಜ್ಯದಲ್ಲಿ ಶುಕ್ರವಾರ 1,890 ಕೊರೊನಾ ಕೇಸ್, 34 ಸಾವು

ಬೆಂಗಳೂರು: ಹೋಲಿಸಿದರೆ ರಾಜ್ಯದಲ್ಲಿ ಶುಕ್ರವಾರ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1890 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಹಾಗೂ 34 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 1631 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಬಿಡುಗಡೆಯಾದ ಸೋಂಕಿತರ ಸಂಖ್ಯೆ 2843110ಕ್ಕೆ ಏರಿಕೆಯಾಗಿದೆ.
ಸದ್ಯ ರಾಜ್ಯದಲ್ಲಿ 23,478 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.30ರಷ್ಟಿದೆ. ಮರಣ ಪ್ರಮಾಣ ಶೇ.1.79ರಷ್ಟಿದೆ. ಇದುವರೆಗೂ ರಾಜ್ಯದಲ್ಲಿ ಒಟ್ಟು 29,03,137 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 36,525 ಜನರನ್ನು ಮಹಾಮಾರಿಗೆ ಮೃತಪಟ್ಟಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ 426 ಜನಕ್ಕೆ ಸೋಂಕು ತಗುಲಿದ್ದು, 9 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 8,467 ಸಕ್ರಿಯ ಪ್ರಕರಣಗಳಿವೆ. ಇಂದು 366 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿ ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

30-07-2021 HMB Kannada

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement