ಸಚಿವಾಕಾಂಕ್ಷಿ ರೇಣುಕಾಚಾರ್ಯಗೆ ಮತ್ತೆ ಸಿಡಿ ಭೀತಿ..?; ಪ್ರಸಾರ ಮಾಡದಂತೆ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಆದ ಬಳಿಕ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಪ್ರಯತ್ನ ಮಾಡುತ್ತಿರುವ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಅವರಿಗೆ ಈಗ ಸಿಡಿ ಭಯ ಶುರುವಾಗಿದೆ. ಹೀಗಾಗಿ ಅವರು ಈಗ ಕೋರ್ಟ್ ಮೊರೆ ಹೋಗಿದ್ದಾರೆ.
ತಮ್ಮ ವಿರುದ್ಧ ಯಾವುದೇ ಸಿಡಿಯನ್ನು ಪ್ರಸಾರ ಮಾಡದಂತೆ ಕೋರಿ ಕೋರ್ಟ್ ಮೊರೆ ಹೋಗಿರುವ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ತಡೆಯಾಜ್ಞೆಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ರೇಣುಕಾಚಾರ್ಯ ಅವರಿಗೆ ಮಾನಹಾನಿಯಾಗುವಂತಹ ಯಾವುದೇ ಸಿಡಿ ದೃಶ್ಯಾವಳಿಗಳನ್ನು ಪ್ರಸಾರ ಮಾಡದಂತೆ ಆದೇಶ ನೀಡಿದೆ.
ಹದಿನೈದು ದಿನಗಳ ಹಿಂದೆ ಸಿಡಿ ವಿಚಾರ ನನಗೇನೂ ಗೊತ್ತಿಲ್ಲ. ನನ್ನದು ಯಾವುದೇ ಸಿಡಿ ಇಲ್ಲ ಎಂದು ಮಾಧ್ಯಮಗಳಮುಂದೆ ಹೇಳಿದ್ದ ಅವರು, ಈಗ ಸಿಡಿ ಕುರಿತು ಕೋರ್ಟ್ ಗೆ ಹೋಗಿ ಮಧ್ಯಂತರ ತಡೆಯಾಜ್ಞೆ ತಂದಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನನ್ನನ್ನು ಯಾರೂ ಸಹ ಬ್ಲ್ಯಾಕ್​​ಮೇಲ್ ಮಾಡಲು ಸಾಧ್ಯವಿಲ್ಲ. ಬ್ಲ್ಯಾಕ್​​ಮೇಲ್ ಖೆಡ್ಡಾಗೆನಾನು ಬಿಳುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ನನ್ನ ವಿರುದ್ಧ ಆರೋಪಿಸುವವರು ಆತ್ಮಾವಲೋಕನ ಮಾಡಿಕೊಳ್ಳಲಿ. ಜೀವನದಲ್ಲಿ ಅವರು ಏನು ಮಾಡಿದ್ದಾರೆಂದು ಯೋಚಿಸಲಿ ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ.
ಯಾವುದನ್ನ ಬೇಕಾದರೂ ಎಡಿಟ್ ಮಾಡಬಹುದು. ಯಾರ ಮುಖ ಯಾವುದಕ್ಕೂ ಜೋಡಿಸಬಹುದು. ಯಾರದ್ದೋ ಕಾಲು, ಯಾರದ್ದೋ ದೇಹ ಗ್ರಾಫಿಕ್ಸ್ ಮಾಡಿಸಬಹುದು. ರೇಣುಕಾಚಾರ್ಯ ವಿಡಿಯೋ ಇದೆ ಎಂದು ಯಾರೋ ಪುಣ್ಯಾತ್ಮ ಬ್ಲಾಕ್ ಮೇಲೆ ಮಾಡಿದ್ದಾರೆ. ಹೀಗಾಗಿ ನಾನು ತಡೆಯಾಜ್ಞೆ ತಂದಿದ್ದೇನೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement