ಹುಬ್ಬಳ್ಳಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಧು ಬಂಗಾರಪ್ಪ

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್. ಬಂಗಾರಪ್ಪ ಅವರ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು.
ಹುಬ್ಬಳ್ಳಿಯಲ್ಲಿ ಇಂದು (ಶುಕ್ರವಾರ) ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಕ್ಷದ ಧ್ವಜ ನೀಡುವ ಮೂಲಕ ಮಧು ಬಂಗಾರಪ್ಪ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.
ಈ ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ಮಧು ಯಾಕ್ಷಿಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಹಿರಿಯ ನಾಯಕರಾದ ಕೆ.ಎಚ್. ಮುನಿಯಪ್ಪ, ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಮಧು ಬಂಗಾರಪ್ಪ ಅವರ ನೂರಾರು ಬೆಂಬಲಿಗರು ಹಾಜರಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement