ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡಲು ಪ್ರಧಾನಿ ಮೋದಿಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ ಇಎಸ್ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯನ್ನಾಗಿ ಉನ್ನತೀಕರಿಸುವಂತೆ ಕೋರಿದರು.
ಮುಂದಿನ ಭೇಟಿ ವೇಳೆ ಯೋಜನೆ ಆಧರಿಸಿ ಮನವಿ ಮಾಡುತ್ತೇನೆ. ಕೇಂದ್ರದ ಯೋಜನೆಗಳನ್ನು ಪಡೆದುಕೊಳ್ಳಲು ತಂಡ ರೂಪಿಸುತ್ತೇನೆ ಎಂದರು.
ಸುಮಾರು 40 ನಿಮಿಷಗಳಿಗೂ ಹೆಚ್ಚು ಕಾಲ ಪ್ರಧಾನಿಯವರೊಂದಿಗೆ ಪ್ರವಾಹ ಪರಿಸ್ಥಿತಿ, ಕೋವಿಡ್ ನಿಯಂತ್ರಣ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸುವಂತೆ ಪ್ರಧಾನಿಯವರು ಸಲಹೆ ಮಾಡಿದರು. ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರಿಗೆ ಶುಭಕೋರಿದ ಪ್ರಧಾನಿಯವರು, ಕರ್ನಾಟಕದ ಅಭಿವೃದ್ಧಿಗೆ ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.

ಪ್ರಮುಖ ಸುದ್ದಿ :-   ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡ ಯುವಕ; ವೀಡಿಯೊ ಮಾಡಿಟ್ಟು ಆತ್ಮಹತ್ಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement