ಗಡಿ ಹಿಂಸಾಚಾರ: ಅಸ್ಸಾಂ ಸಿಎಂ, 6 ಮಂದಿ ಹಿರಿಯ ಅಧಿಕಾರಿಗಳ ವಿರುದ್ಧ ಮಿಜೋರಾಂ ಪೊಲೀಸರಿಂದ ಎಫ್‌ಐಆರ್ ದಾಖಲು..!

ಗುವಾಹಟಿ: ಗಡಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಜೋರಾಂ ಪೊಲೀಸರು ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ಹಾಗೂ 6 ಮಂದಿ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆಂದು ವರದಿಯಾಗಿದೆ.
ಜುಲೈ.26 ರಂದು ಅಸ್ಸಾಂ-ಮಿಜೋರಾಮ್ ಅಂತರ್ ರಾಜ್ಯ ಗಡಿ ಪ್ರದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಮುಖ್ಯಮಂತ್ರಿ ಶರ್ಮಾ ಹಾಗೂ ಇತರ 6 ಮಂದಿ ಹಿರಿಯ ಅಧಿಕಾರಿಗಳು, 200 ಮಂದಿ ಪೊಲೀಸರ ವಿರುದ್ಧ ಮಿಜೋರಾಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.
ಡಿಐಜಿ ಅನುರಾಗ್ ಅಗರ್ವಾಲ್, ಉಪ ಐಜಿಪಿ ದೇವ್ ಜ್ಯೋತಿ ಮುಖರ್ಜಿ, ಜಿಲ್ಲಾ ಮ್ಯಾಜಿಸ್ಟ್ರೇಟ್ ಕೀರ್ತಿ ಜಲ್ಲಿ, ಎಸ್’ಪಿ ವೈಭವ್ ಚಂದ್ರಶೇಖರ್ ನಿಂಬಾಳ್ಕರ್, ವಿಭಾಗೀಯ ಅರಣ್ಯ ಅಧಿಕಾರಿ ಸನ್ನಿಡಿಯೋ ಚೌಧರಿ ಮತ್ತು ಧೋಲೈ ಪೊಲೀಸ್ ಠಾಣಾಧಿಕಾರಿ ಸಾಹಬ್ ಉದ್ದೀನ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವರದಿಗಳು ಹೇಳುತ್ತಿವೆ.
ಅಸ್ಸಾಂ ಮತ್ತು ಮಿಜೋರಂ ಮಧ್ಯೆ ಉಂಟಾಗಿರುವ ಗಡಿ ವಿವಾದ ಈಗ ವಿಕೋಪಕ್ಕೆ ತಿರುಗಿದೆ. ರಾಜ್ಯಗಳು ಇದಕ್ಕೆ ಪರಸ್ಪರ ದೂಷಣೆಯಲ್ಲಿ ತೊಡಗಿವೆ. ಕಳೆದ ವಾರದಿಂದ ಗಡಿಯಲ್ಲಿ ಹಿಂಸಾಚಾರ ನಡೆಯುತ್ತಿದೆ. ಜುಲೈ 26 ರಂದು ಉಭಯ ರಾಜ್ಯಗಳ ಗಡಿಯಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ 6 ಮಂದಿ ಪೊಲೀಸರು ಹಾಗೂ ಓರ್ವ ನಾಗರೀಕ ಮೃತಪಟ್ಟಿದ್ದರು.

ಪ್ರಮುಖ ಸುದ್ದಿ :-   ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಶಿಫಾರಸು: ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದ ಎಎಪಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement