ವೃದ್ಧಾಪ್ಯ ವೇತನ ೧೨೦೦ ರೂ., ವಿಧವಾ ವೇತನ ೮೦೦ ರೂ.ಗೆ ಹೆಚ್ಚಳ: ಸಿಎಂ ಬೊಮ್ಮಾಯಿ ಮೊದಲ ಅಧಿಕೃತ ಆದೇಶ

posted in: ರಾಜ್ಯ | 0

ಬೆಂಗಳೂರು: ವೃದ್ಧಾಪ್ಯ ವೇತನ ಸೇರಿ ಸಾಮಾಜಿಕ ಭದ್ರತಾ ಯೋಜನೆಯ ಮಾಸಾಶನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಬಸವರಾಜ ಬೊಮ್ಮಾಯಿ ಅವರ ಮೊದಲ ಅಧಿಕೃತ ಆದೇಶ ಇದಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುತ್ತಿರುವ ಮಾಸಾಶನವನ್ನು ಹೆಚ್ಚಳ ಮಾಡಲಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಸಂಪುಟ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ತೀರ್ಮಾನ ಕೈಗೊಂಡಿದ್ದರು. ಮಾಸಾಶನಗಳನ್ನು ೨೦೦ ರೂಪಾಯಿ ಹೆಚ್ಚಳ ಮಾಡಲು ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ.

ಸಂಧ್ಯಾ ಸುರಕ್ಷಾ ಯೋಜನೆಯಡಿ ವೃದ್ಧಾಪ್ಯ ವೇತನವನ್ನು ೧೦೦೦ ರೂ.ನಿಂದ ೧೨೦೦ ರೂ.ಗೆ ಹೆಚ್ಚಳ ಮಾಡಲಾಗಿದೆ. ವಿಧವಾ ವೇತನ ೬೦೦ ರೂ.ನಿಂದ ೮೦೦ ರೂ.ಗೆ, ಶೇಕಡ ೪೦ ರಿಂದ ೭೫ರಷ್ಟು ಅಂಗವಿಕಲತೆ ಹೊಂದಿದ ವಿಕಲಚೇತನರಿಗೆ ೬೦೦ ರೂ.ನಿಂದ ೮೦೦ ರೂ.ಗೆ ಹೆಚ್ಚಳ ಮಾಡಲಾಗಿದ್ದು, ಫಲಾನುಭವಿಗಳಿಗೆ ಆಗಸ್ಟ್  ತಿಂಗಳಿನಿಂದಲೇ ಪರಿಷ್ಕೃತ ಮಾಸಾಶನ ಸಿಗಲಿದೆ.

ನೂತನ ಮುಖ್ಯಮಂತ್ರಿಯಾಗಿ ಜುಲೈ ೨೮ ರಂದು ಪ್ರಮಾಣವಚನ ಸ್ವೀಕರಿಸಿದ್ದ ಬಸವರಾಜ ಬೊಮ್ಮಾಯಿ ಜನಪರ ಆಡಳಿತದ ಭರವಸೆ ನೀಡಿದ್ದರು. ರೈತ ಮಕ್ಕಳಿಗೆ ಶಿಕ್ಷಣ ವೇತನ ಸಹಿತ ಸಂಧ್ಯಾ ಸುರಕ್ಷಾ ಯೋಜನೆ ಹಾಗೂ ವಿಧವಾ ವೇತನದ ಮೊತ್ತವನ್ನು ಏರಿಕೆ ಮಾಡುವುದಾಗಿ ಅಂದೇ ಘೋಷಿಸಿದ್ದರು.

ಇಂದಿನ ಪ್ರಮುಖ ಸುದ್ದಿ :-   ಬಾಡಿಗೆದಾರರಿಗೂ ಗೃಹ ಬಳಕೆ ವಿದ್ಯುತ್ ಉಚಿತ, ವಾಣಿಜ್ಯ ಬಳಕೆಗೆ ಇಲ್ಲ : ಸಿಎಂ ಸಿದ್ಧರಾಮಯ್ಯ.

 

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement