ಸಂಪುಟ ವಿಸ್ತರಣೆ : ಬಿಜೆಪಿ ವರಿಷ್ಠರೊಂದಿಗೆ ಸಮಾಲೋಚನೆಗೆ ದೆಹಲಿಗೆ ತೆರಳಿದ ಸಿಎಂ

posted in: ರಾಜ್ಯ | 0

ಬೆಂಗಳೂರು: ಸಂಪುಟ ವಿಸ್ತರಣೆ ಕುರಿತು ಕೇಂದ್ರದ ಬಿಜೆಪಿ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ದೆಹಲಿಗೆ ತೆರಳಿದರು.
ರಾಷ್ಟ್ರ ರಾಜಧಾನಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಬಹುಶಹ ನಾಳೆ ಸಭೆ ನಡೆಯುವ ಸಾಧ್ಯತೆಯಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದರು.
ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ವಾರ ಬೇಕಾಗಿಲ್ಲ, ಸೋಮವಾರವೇ ಕೇಂದ್ರದ ವರಿಷ್ಠರಿಂದ ನಿರ್ದೇಶನ ಬರುವ ಸಾಧ್ಯತೆ ಇದೆ ಎಂದು ಇಂದು ಬೆಳಗ್ಗೆ ಮುಖ್ಯಮಂತ್ರಿ ಹೇಳಿಕೆ ನೀಡಿದ್ದರು.
ಯಡಿಯೂರಪ್ಪ ಜುಲೈ 26 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನೂತನ ಮುಖ್ಯಮಂತ್ರಿಯಾಗಿ ಜುಲೈ 28 ರಂದು ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ