ಹೊನ್ನಾವರ: ತಾಯಿ ಬಟ್ಟೆ ಒಗೆಯುವಾಗ ಆಡುತ್ತಿದ್ದ ಒಂದೂವರೆ ವರ್ಷದ ಮಗು ನದಿಯಲ್ಲಿ ಬಿದ್ದು ನಾಪತ್ತೆ…!

posted in: ರಾಜ್ಯ | 0

ಹೊನ್ನಾವರ : ಹೊನ್ನಾವರ ತಾಲೂಕಿನ ಹುಡಗೋಡ ಬಳಿ ಒಂದೂವರೆ ವರ್ಷದ ಮಗು ಆಕಸ್ಮಿಕವಾಗಿ ಹೊಳೆಯಲ್ಲಿ ಬಿದ್ದು ನೀರುಪಾಲಾದ ಮನ ಕಲಕುವ ಘಟನೆ ನಡೆದಿದೆ.
ತಾಯಿಯ ಜೊತೆಗೆ ಬಟ್ಟೆ ತೊಳೆಯಲು ನದೀ ತೀರಕ್ಕೆ ಬಂದಿದ್ದ ಪುಟ್ಟ ಮಗು ಕಾರ್ತಿಕ ರಮೇಶ ನಾಯ್ಕ ಎಂಬಾತನೇ ಗುಂಡಬಾಳಾ ನದಿ ಪಾಲಾದ ದುರ್ದೈವಿಯಾಗಿದ್ದಾನೆ.
ಭಾನುವಾರ ಮಧ್ಯಾಹ್ನ ತಾಯಿ ಶ್ರುತಿ ರಮೇಶ ನಾಯ್ಕ ಬಟ್ಟೆ ತೊಳೆಯಲು ಮನೆಯ ಸಮೀಪದ ಗುಂಡಬಾಳಾ ನದಿಯ ಬಳಿ ತೆರಳಿದಾಗ ಈತನೂ ತಾಯಿಯ ಜೊತೆಯೇ ಹೋಗಿದ್ದ ಎನ್ನಲಾಗಿದೆ.
ತಾಯಿಬಟ್ಟೆ ತೊಳೆಯುತ್ತಿರುವಾಗ ಪಕ್ಕದಲ್ಲಿಯೇ ಇದ್ದ ಮಗು ಆಕಸ್ಮಿಕವಾಗಿ ನೀರಲ್ಲಿ ಬಿದ್ದಿದೆ ಎನ್ನಲಾಗಿದೆ. ಮಗುವಿನ ಸುಳಿವು ಇನ್ನೂ ಪತ್ತೆಯಾಗಿಲ್ಲ.
ವಿಷಯ ತಿಳಿಯುತ್ತಿದ್ದಂತೆ ಮಗುವಿನ ಕುಟುಂಬಸ್ಥರು ಹಾಗೂ ಸುತ್ತಮುತ್ತಲ ಜನರು ನದಿಯ ಸಮೀಪಕ್ಕೆ ಧಾವಿಸಿ ಬಂದಿದ್ದಾರೆ. ಸಾರ್ವಜನಿಕರು ಪತ್ತೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಮಗು ಇನ್ನೂ ಪತ್ತೆಯಾಗಿಲ್ಲ. ಹೊನ್ನಾವರ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮಗುವಿನ ಹುಡುಕಾಟದಲ್ಲಿ ತೊಡಗಿದ್ದಾರೆ. ತಾಯಿ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಮೊದಲ ಪಟ್ಟಿಯಲ್ಲಿ ತಂದೆ-ಮಕ್ಕಳಿಗೆ ಟಿಕೆಟ್ ನೀಡಿದ ಕಾಂಗ್ರೆಸ್‌ :ಕುಟುಂಬ ರಾಜಕಾರಣಕ್ಕೆ ಮಣೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement