ಅನುದಾನರಹಿತ ಶಾಲಾ ಶಿಕ್ಷಕರು-ಸಿಬ್ಬಂದಿಗೆ ಕೋವಿಡ್ ವಿಶೇಷ ಪ್ಯಾಕೇಜ್ ಪರಿಹಾರ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ಅನುದಾನರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಕೋವಿಡ್‌ ವಿಶೇಷ ಪ್ಯಾಕೇಜ್‌ ಪರಿಹಾರ ಧನ ಬಿಡುಗಡೆ ಮಾಡಲಾಗಿದೆ.
2021-22 ನೇ ಸಾಲಿಗೆ ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಕೋವಿಡ್ -19 ವಿಶೇಷ ಪ್ಯಾಕೇಜ್ ಪರಿಹಾರ ಧನ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಲಾಗಿದೆ.
2021-22 ನೇ ಸಾಲಿಗೆ ರಾಜ್ಯದ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,72,945 ಶಿಕ್ಷಕರು ಮತ್ತು 34,000 ಬೋಧಕೇತರ ಸಿಬ್ಬಂದಿಗಳಿಗೆ ತಲಾ 5 ಸಾವಿರ ರೂ. ರಂತೆ ಕೋವಿಡ್ 19 ವಿಶೇಷ ಪ್ಯಾಕೇಜ್ ಪರಿಹಾರ ಧನವಾಗಿ ಬಿಡುಗಡೆಗೊಳಿಸಲು ಆದೇಶಿಸಲಾಗಿದೆ.
ರಾಜ್ಯ ಸರ್ಕಾರದ ಅದೇಶದಲ್ಲಿ ನಿಯಮಾನುಸಾರ ಅರ್ಹ ಫಲಾನುಭವಿಗಳನ್ನು ನಿಖರವಾಗಿ ಗುರುತಿಸಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ತಂತ್ರಾಂಶದ ಅಡಿಯಲ್ಲಿ ಡಿಬಿಟಿ ಮೂಲಕ ಪರಿಹಾರ ಧನವನ್ನು ವರ್ಗಾಯಿಸುವಂತೆ ತಿಳಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement