ಕರ್ನಾಟಕದಲ್ಲಿ ಭಾನುವಾರ 1875 ಹೊಸ ಕೊರೊನಾ ಸೋಂಕು ವರದಿ

ಬೆಂಗಳೂರು: ರಾಜ್ಯದಲ್ಲಿ ಇಂದು(ಭಾನುವಾರ) 1875 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ.ಇದೇ ಸಮಯದಲ್ಲಿ 25 ಮಂದಿ ಮೃತಪಟ್ಟಿದ್ದು, 1502 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಒಟ್ಟು 24,144 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,06,999 ಮಂದಿಗೆ ಕೊರೊನಾ ಬಂದಿದೆ. 28,46,244 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.33ರಷ್ಟಿದೆ.ಜಿಲ್ಲಾವಾರು ವರದಿಯಲ್ಲಿ ದಕ್ಷಿಣ ಕನ್ನಡ 410 ಕೇಸ್‍ಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.1.20ರಷ್ಟಿದೆ.
ಬೆಂಗಳೂರಿನಲ್ಲಿ ಇಂದು 409 ಮಂದಿಗೆ ಕೊರೊನಾ ಸೋಂಕು ತಗುಲಿದೆ. 377 ಜನ ಡಿಸ್ಚಾರ್ಜ್ ಆಗಿದ್ದಾರೆ. 8 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

01-08-2021 HMB Kannada

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

ನಿಮ್ಮ ಕಾಮೆಂಟ್ ಬರೆಯಿರಿ

advertisement