ರಾಜ್ಯದಲ್ಲಿ ನಾಳೆಯಿಂದಲೇ ಖಾಸಗಿ ಶಾಲೆ ಆರಂಭದ ನಿರ್ಧಾರ ಕೈಬಿಟ್ಟ `ರುಪ್ಸಾ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೂ ರಾಜ್ಯದಲ್ಲಿ ನಾಳೆಯಿಂದ ಖಾಸಗಿ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿದ್ದ ರುಪ್ಸಾ (RUPSA) ಸಂಘಟನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಶಾಲೆ ಆರಂಭಿಸುವ ನಿರ್ಧಾರವನ್ನು ಕೈಬಿಟ್ಟಿದೆ.
ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ರುಪ್ಸಾ ಸಂಘಟನೆ ಅಧ್ಯಕ್ಷ ಹಾಲನೂರು ಲೇಪಾಕ್ಷಿ, ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ರಾಜ್ಯದಲ್ಲಿ ಅನುದಾನ ರಹಿತ ಖಾಸಗಿ ಶಾಳೆಗಳ ಒಕ್ಕೂಟದಿಂದ ಶಾಳೆ ಆರಂಭಿಸುವ ನಿರ್ಧಾರ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.
ಶಾಲೆ ಆರಂಭದ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ಮಾಡಿದ್ದಾರೆ. ಮುಖ್ಯಮಂತ್ರಿಗಳ ಭೇಟಿ ಮಾಡಿ ಶಾಲೆ ಆರಂಭದ ಬಗ್ಗೆ ಚರ್ಚೆ ನಡೆಸಲಾಗುವುದು. ಶಾಲೆಗಳನ್ನು ಆರಂಭಿಸುವ ಬಗ್ಗೆ ದುಡುಕಿನ ನಿರ್ಧಾರ ಬೇಡ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಹೀಗಾಗಿ ನಾಳೆಯಿಂದ ಖಾಸಗಿ ಶಾಲೆಗಳ ಆರಂಭದ ನಿರ್ಧಾರ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement