ಅತ್ಯಾಚಾರಿ ಜೊತೆ ಮದುವೆಯಾಗಲು ಅನುಮತಿ ಕೋರಿದ್ದ ಸಂತ್ರಸ್ತೆಯ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ನವದೆಹಲಿ: ಕೇರಳದ ಕೊಟ್ಟಿಯೂರಿನಲ್ಲಿ ಮಹಿಳೆಯೊಬ್ಬರು ತನ್ನ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಯನ್ನೇ ಮದುವೆಯಾಗಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಸೋಮವಾರ ವಜಾಗೊಳಿಸಿದೆ.
ಈ ಪ್ರಕರಣದಡಿ 20 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಪಾದ್ರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೂಡ ನ್ಯಾಯಾಲಯವು ವಜಾಗೊಳಿಸಿದೆ.
ತನ್ನ ಮೇಲೆ ಅತ್ಯಾಚಾರವೆಸಗಿದ್ದ ಪಾದ್ರಿಯನ್ನು ಮದುವೆಯಾಗಲು ಅನುಮತಿ ನೀಡುವಂತೆ ಸಂತ್ರಸ್ತೆಯೇ ಮನವಿ ಮಾಡಿದ್ದರೂ ಆಕೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಆರೋಪಿಗೆ ಈಗಾಗಲೇ 20 ವರ್ಷಗಳ ಕಾಲ ಕಾರಾಗೃಹ ಶಿಕ್ಷೆಯನ್ನು ಘೋಷಿಸಲಾಗಿದ್ದು, ಆತನ ಬಿಡುಗಡೆ ಮಾಡಿ, ಸಂತ್ರಸ್ತೆಯೊಂದಿಗೆ ಮದುವೆಯಾಗಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕೇರಳದ ಕೊಟ್ಟಿಯೂರಿನ ಅಪ್ರಾಪ್ತೆಯ ಮೇಲೆ ಚರ್ಚ್​ನ ಪಾದ್ರಿ ಅತ್ಯಾಚಾರವೆಸಗಿದ್ದರು. ಬಳಿಕ ಆಕೆ ಮಗುವಿಗೆ ಜನ್ಮ ನೀಡಿದ್ದಳು. ಈ ಪ್ರಕರಣದಲ್ಲಿ ಈಗಾಗಲೇ ಆರೋಪಿಗೆ ಹೈಕೋರ್ಟ್​ನಿಂದ 20 ವರ್ಷಗಳ ಶಿಕ್ಷೆ ನೀಡಲಾಗಿದೆ. ಆದರೆ, ಆ ಶಿಕ್ಷೆಯನ್ನು ವಜಾಗೊಳಿಸಿ ಆತನನ್ನು ಬಿಡುಗಡೆ ಮಾಡಿದರೆ ನಾವಿಬ್ಬರೂ ಮದುವೆಯಾಗಲು ಬಯಸಿರುವುದಾಗಿ ಸಂತ್ರಸ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಳು.
‘ತಾನು ಸಂತ್ರಸ್ತೆಯನ್ನು ಮದುವೆಯಾಗಬೇಕೆಂದು ಭಾವಿಸಿದ್ದೆ. ಆದರೆ ಅತ್ಯಾಚಾರದ ವೇಳೆ ಆಕೆ ಅಪ್ರಾಪ್ತೆಯಾಗಿದ್ದಳು. ಬಳಿಕ ಆಕೆ ಮಗುವಿಗೆ ಜನ್ಮ ನೀಡಿದಳು’ ಎಂಬ ಕಾರಣ ನೀಡಿ ಮಾಜಿ ಪಾದ್ರಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಎರಡೂ ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಮೂರ್ತಿ ವಿನೀತ್ ಶರಣ್ ಮತ್ತು ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರ ನ್ಯಾಯಪೀಠ ಈ ಪ್ರಕರಣದಲ್ಲಿ ಎಲ್ಲವನ್ನೂ ಗಮನಿಸಿಯೇ ಹೈಕೋರ್ಟ್​ ಆರೋಪಿಗೆ 20 ವರ್ಷಗಳ ಶಿಕ್ಷೆ ಘೋಷಿಸಿದೆ. ಹೀಗಾಗಿ, ಈ ಪ್ರಕರಣದಲ್ಲಿ ನಾವು ಮಧ್ಯ ಪ್ರವೇಶಿಸಲು ಬಯಸುವುದಿಲ್ಲ. ಹೈಕೋರ್ಟ್ ನೀಡಿರುವ ತೀರ್ಪು ಸರಿಯಾಗಿದೆ ಎಂದು ಹೇಳಿದೆ.
ಸಂತ್ರಸ್ತೆ ಟ್ರಯಲ್ ಕೋರ್ಟ್​ಗೆ ಅರ್ಜಿ ಸಲ್ಲಿಸಿ, ಆರೋಪಿ ಮದುವೆಯಾಗಲು ಅನುಮತಿ ನೀಡುವಂತೆ ಮನವಿ ಮಾಡಬಹುದು ಎಂದು ಸಲಹೆ ನೀಡಿದೆ.

ಪ್ರಮುಖ ಸುದ್ದಿ :-   ಬೆಂಬಲ ಹಿಂಪಡೆದ ಮೂವರು ಪಕ್ಷೇತರ ಶಾಸಕರು : ಸಂಕಷ್ಟದಲ್ಲಿ ಹರಿಯಾಣದ ಬಿಜೆಪಿ ಸರ್ಕಾರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement