ಆಗಸ್ಟ್ 5 ಕ್ಕೆ ಶಾಸಕ ಎನ್.ಮಹೇಶ್ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಸಾಕಷ್ಟು ರಾಜಕೀಯ ಪ್ರಹಸನಗಳ ಬಳಿಕ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಉಚ್ಚಾಟಿತ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲದ ಶಾಸಕ ಎನ್.ಮಹೇಶ್ ಬಿಜೆಪಿ ಸೇರುತ್ತಿದ್ದಾರೆ. ಆಗಸ್ಟ್ 5 ರಂದು ಶಾಸಕ ಎನ್.ಮಹೇಶ್ ತಮ್ಮ ಬೆಂಬಲಿಗರೊಂದಿಗೆ ಅಗಸ್ಟ್ 5 ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸರಳ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲು ಸಮ್ಮುಖದಲ್ಲಿ ಬಿಜೆಪಿಗೆ ಸೇರಲಿದ್ದಾರೆ.
ಮಾಜಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಈಗಾಗಲೇ ಈ ಸಂಬಂಧ ಭೇಟಿ ಮಾಡಿರುವ ಮಹೇಶ್, ತಾವು ಸೇರ್ಪಡೆ ಆಗುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಶಾಸಕ ಎನ್.ಮಹೇಶ್ ತಮ್ಮ ಬಿಜೆಪಿ ಸೇರ್ಪಡೆಗೆ ವಿರೋಧಿಸಿರುವ ಸ್ಥಳೀಯ ಬಿಜೆಪಿ ನಾಯಕರ ಮನವೊಲಿಕೆ ಪ್ರಯತ್ನದಲ್ಲೂ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಚುನಾವಣೆಯಲ್ಲಿ ಬಿಎಸ್ಪಿಯಿಂದ ಕೊಳ್ಳೆಗಾಲ ಕ್ಷೇತ್ರದಲ್ಲಿ ಸ್ಪರ್ಧಿಸಿದ ಎನ್.ಮಹೇಶ್ ವಿರುದ್ಧ ಬಿಜೆಪಿಯ ಮಾಜಿ ಶಾಸಕ ಜಿ.ಎನ್.ನಂಜುಡಸ್ವಾಮಿ ಸ್ಪರ್ಧಿಸಿ ಸೋತಿದ್ದರು. ಹೀಗಾಗಿ ಎನ್.ಮಹೇಶ್ ಬಿಜೆಪಿ ಸೇರ್ಪಡೆಗೆ ಜಿ.ಎನ್.ನಂಜುಡಸ್ವಾಮಿ ವಿರೋಧವಿದ್ದು, ಈ ಹಿನ್ನೆಲೆಯಲ್ಲಿ ನಂಜುಂಡಸ್ವಾಮಿ ನಿವಾಸಕ್ಕೂ ಭೇಟಿ ನೀಡಿರುವ ಎನ್.ಮಹೇಶ್ ಅವರ ಮನವೊಲಿಸುವ ಪ್ರಯತ್ನ ಕೂಡ ನಡೆಸಿದ್ದಾರಂತೆ.

ಪ್ರಮುಖ ಸುದ್ದಿ :-   ಕಾರವಾರ : ರಸ್ತೆ ಅಪಘಾತದಲ್ಲಿ ಖ್ಯಾತ ವೈದ್ಯ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement