ಕರ್ನಾಟಕದಲ್ಲಿ ಕುಸಿತ ಕಂಡ ಹೊಸ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸೋಮವಾರ (ಆಗಸ್ಟ್ 2) ಹೊಸದಾಗಿ 1,285 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ ಹಾಗೂ ಕೊರೊನಾ ಸೋಂಕಿನಿಂದ 25 ಜನರ ಸಾವು ಸಂಭವಿಸಿದೆ.
, ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,08,284 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,47,627 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,612 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 24,021 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಒಂದೇ ದಿನ 290 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,28,038 ಕ್ಕೆ ಏರಿಕೆಯಾಗಿದೆ. 12,28,038 ಸೋಂಕಿತರ ಪೈಕಿ 12,03,482 ಜನರು ಗುಣಮುಖರಾಗಿದ್ದಾರೆ. ಕೊರೊನಾ ಸೋಂಕಿಗೆ 5 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ಕೊರೊನಾದಿಂದ ಈವರೆಗೆ 15,885 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,670 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

02-08-2021 HMB Kannada

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement