ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿ ಕೊರೊನಾ ವಾರಿಯರ್ಸ್ ಎಂದು ಘೋಷಣೆ

ಬೆಂಗಳೂರು: ಆರ್​ಡಿಪಿಆರ್​ನ ಎಲ್ಲ ಸಿಬ್ಬಂದಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್​ ಇಲಾಖೆ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.
2020ರ ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ನೀಡಲಾಗಿದ್ದು, ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿಪಂ, ತಾಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರನ್ನು ಕೊವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಮೊದಲ ಡೋಸ್​ ಕೊವಿಡ್ ಲಸಿಕೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದರು. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್​ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ಪತ್ರ ಬರೆದಿದ್ದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

ನಿಮ್ಮ ಕಾಮೆಂಟ್ ಬರೆಯಿರಿ

advertisement