ದ್ವಿತೀಯ ಪಿಯು ಫಲಿತಾಂಶ ತಿರಸ್ಕರಿಸಿದ 878 ವಿದ್ಯಾರ್ಥಿಗಳು; ಅವರಿಗೆ ಆಗಸ್ಟ್ 19ಕ್ಕೆ ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ 878 ವಿದ್ಯಾರ್ಥಿಗಳು ಶಿಕ್ಷಣ ಇಲಾಖೆ ನೀಡಿದ ದ್ವಿತೀಯ ಪಿಯು ಫಲಿತಾಂಶವನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ಅವರಿಗೆ ಇದೇ ಆಗಸ್ಟ್ 19ರಂದು ಪಿಯುಸಿ ಪರೀಕ್ಷೆಯನ್ನು ನಡೆಸಲು ಪಿಯು ಬೋರ್ಡ್​ ನಿರ್ಧಾರ ಮಾಡಿದೆ.
ಶಿಕ್ಷಣ ಇಲಾಖೆ ಸುಮಾರು 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪಾಸ್ ಮಾಡಿತ್ತು. ಇದೀಗ 878 ವಿದ್ಯಾರ್ಥಿಗಳು ಫಲಿತಾಂಶ ಸಮಾಧಾನ ತಂದಿಲ್ಲ ಎಂದು ತಿರಸ್ಕರಿಸಿದ್ದಾರೆ. ರಾಜ್ಯದಲ್ಲಿ ಬಳ್ಳಾರಿ ಜಿಲ್ಲೆಯೊಂದರಲ್ಲೇ 221 ವಿದ್ಯಾರ್ಥಿಗಳು ಫಲಿತಾಂಶವ ತಿರಸ್ಕಾರ ಮಾಡಿದ್ದಾರೆ.
ಕೊರೋನಾ ಕಾರಣದಿಂದ ಶಿಕ್ಷಣ ಇಲಾಖೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಪಾಸ್ ಮಾಡಿತ್ತು. ಫಲಿತಾಂಶಕ್ಕೆ ಎಸ್​ಎಸ್​ಎಲ್​ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದ್ದು, ಅದರಂತೆ ಜು.20ರಂದು ದ್ವಿತೀಯ ಪಿಯು ಫಲಿತಾಂಶವನ್ನು ಪ್ರಕಟ ಮಾಡಲಾಗಿತ್ತು. ರಿಸಲ್ಟ್​ ನೀಡುವ ಮುನ್ನ ​ ವಿದ್ಯಾರ್ಥಿಗಳಿಗೆ ಫಲಿತಾಂಶ ತಿರಸ್ಕರಿಸುವ ಅವಕಾಶ ನೀಡಿ ಅವರಿಗೆ ಆಗಸ್ಟ್​ ತಿಂಗಳಲ್ಲಿ ಮತ್ತೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿತ್ತು.
ಈಗ ಫಲಿತಾಂಶ ತಿರಸ್ಕಾರ ಮಾಡಿದವರಿಗೆ ಆಗಸ್ಟ್ 19ರಂದು ಪಿಯುಸಿ ಪರೀಕ್ಷೆಯನ್ನು ನಡೆಸಲು ಪಿಯು ಬೋರ್ಡ್​ ನಿರ್ಧಾರ ಮಾಡಿದೆ.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement