ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಹುಬ್ಬಳ್ಳಿಯಲ್ಲಿ ಅಪಹರಣವಾಗಿದ್ದ ಮಗು ಬೆಂಗಳೂರಿನಲ್ಲಿ ಪತ್ತೆ

ಹುಬ್ಬಳ್ಳಿ: ಇಲ್ಲಿಯ ರಾಮಲಿಂಗೇಶ್ವರ ನಗರದಲ್ಲಿ ಅಪಹರಣಕ್ಕೊಳಗಾಗಿದ್ದ ಆರು ವರ್ಷದ ಮಗುವನ್ನು ಗೋಕುಲ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ಶಬನಂ ಗದಗಕರ ಎಂಬುವವರೇ ಬಂಧಿತ ಆರೋಪಿ. ಶನಿವಾರ ಮಧ್ಯಾಹ್ನ ಪಕ್ಕದ ಮನೆಯ ಅಸ್ಲಂ ಬಳ್ಳಾರಿ ಎಂಬವರ ಮಗುವನ್ನು ಮಾರುಕಟ್ಟೆಗೆ ಕರೆದುಕೊಂಡು ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದಳು. ಅಸ್ಲಂ ಅವರು ಗೋಕುಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತಕ್ಷಣ ತನಿಖೆ ಕೈಗೊಂಡ ಪೊಲೀಸರಿಗೆ, ಮೊಬೈಲ್ ಟವರ್ ಆಧಾರದಲ್ಲಿ ಆರೋಪಿಯು ಬೆಂಗಳೂರಿನಲ್ಲಿ ಇರುವ ಮಾಹಿತಿ ಸಿಕ್ಕಿತ್ತು.
ವಿಶೇಷ ತಂಡ ರಚಿಸಿ ಮಾಹಿತಿ ಸಂಗ್ರಹಿಸಿದ ಪೊಲೀಸರಿಗೆ, ಶಬನಂ ಬೆಂಗಳೂರಿನ ಯುವಕನನ್ನು ಮದುವೆಯಾಗಿ, ವಿಚ್ಛೇದನ ಪಡೆದಿದ್ದರು. ನಂತರ ಮಂಡ್ಯದ ವ್ಯಕ್ತಿಯ ಜೊತೆ ಸ್ನೇಹದಲ್ಲಿರುವುದು ತಿಳಿದು ಬಂದಿತ್ತು. ಶಬನಂ ಮಗುವಿನ ಜೊತೆ ಆತನಲ್ಲಿಗೇ ತೆರಳುತ್ತಿರುವ ಮಾಹಿತಿ ಆಧರಿಸಿ, ಪೊಲೀಸರು ಅವನನ್ನು ಸಂಪರ್ಕಿಸಿ ಸಹಕಾರ ಕೋರಿದ್ದರು. ಆಗ ಆತ ಶಬನಂ ಸಂಪರ್ಕಿಸಿ ಮೆಜೆಸ್ಟಿಕ್ ಬಸ್ ನಿಲ್ದಾಣದ ಆರನೇ ಪ್ಲಾಟ್ ಫಾರ್ಮ್ ನಲ್ಲಿ ಇರಲು ತಿಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಈ ಮಧ್ಯೆ ಕಮಿಷನರ್ ಲಾಬೂರಾಮ್, ಬೆಂಗಳೂರಿನ ಚಿಕ್ಕಪೇಟೆ ಎಸಿಪಿ ಹಾಗೂ ಉಪ್ಪಾರಪೇಟೆ ಪೊಲೀಸ್ ಸಿಬ್ಬಂದಿ ಸಹಾಯ ಕೇಳಿದ್ದರು. ಹಾಗೂ ಮಗು ಹಾಗೂ ಆರೋಪಿ ಫೋಟೊವನ್ನು ಅವರ ವಾಟ್ಸಾಪ್‌ಗೆ ಕಳುಹಿಸಿ ಈ ವಿಚಾರದಲ್ಲಿ ತಕ್ಷಣದ ಸಹಾಯ ಕೋರಿದ್ದರು.. ತಕ್ಷಣ ಕಾರ್ಯ ಪ್ರವೃತ್ತರಾದ ಬೆಂಗಳೂರು ಪೊಲೀಸರು ಮಗುವನ್ನು ರಕ್ಷಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಧ್ಯಾಹ್ನ ಬೆಂಗಳೂರಿಗೆ ತೆರಳಿದ ಗೋಕುಲ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಮಗುವನ್ನು ಹುಬ್ಬಳ್ಳಿಗೆ ಕರೆತಂದಿದ್ದಾರೆ.
ಮಗುವನ್ನು ಯುವತಿ ಅಪಹರಣ ಮಾಡಿದ್ದು ಯಾಕೆ, ಅವಳು ಅದೇ ಕೃತ್ಯದಲ್ಲಿಯೇ ಭಾಗಿಯಾಗಿರುವ ಆರೋಪಿಯೇ ಎನ್ನುವುದು ತನಿಖೆಯಿಂದ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement