ಪೊಲೀಸ್ ವಶದಲ್ಲಿದ್ದ ಆಫ್ರಿಕಾ ಪ್ರಜೆ ಸಾವು; ಪೊಲೀಸ್ ಠಾಣೆ ಮುಂದೆ ಧರಣಿ

ಬೆಂಗಳೂರು: ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿ ಜೆ.ಸಿ.ನಗರ ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆಯೋರ್ವ ಮೃತಪಟ್ಟಿದ್ದಾನೆ.
ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರ ವಶದಲ್ಲಿದ್ದ ಆಫ್ರಿಕಾ ಪ್ರಜೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ವಿದೇಶಿ ಪ್ರಜೆ ಮೃತಪಟ್ಟಿದ್ದಾನೆ.
ಆಫ್ರಿಕಾ ಪ್ರಜೆ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 5 ಗ್ರಾಂ ಎಂಡಿಎಂಎ ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ವೇಳೆ ಎದೆನೋವು ಮತ್ತು ಶೀತ ಇದೆ ಎಂದು ಆಫ್ರಿಕಾ ಪ್ರಜೆ ಪೊಲೀಸರಿಗೆ ತಿಳಿಸಿದ್ದ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ಪೊಲೀಸರು ಚಿಕಿತ್ಸೆ ಕೊಡಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಶಕ್ಕೆ ವ್ಯಕ್ತಿ ಮೃತಪಟ್ಟಿದ್ದು, ಆತನ ಗುರುತು ಈವರೆಗೂ ಪತ್ತೆಯಾಗಿಲ್ಲ. ಸಾವಿಗೆ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿಸದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಆಫ್ರಿಕನ್ ನಾಗರಿಕರು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮೃತ ಆಫ್ರಿಕನ್ ಪ್ರಜೆಯನ್ನು ಬಂಧಿಸಿದ್ದ ಪೊಲೀಸರು ಸ್ಥಳಕ್ಕೆ ಬರುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಆಫ್ರಿಕನ್ ಪ್ರಜೆ ಏಕಾಏಕಿ ಮೃತಪಟ್ಟ ಹಿನ್ನೆಲೆಯಲ್ಲಿ ಆತನ ಸ್ನೇಹಿತರು, ಸಂಬಂಧಿಕರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರ ದೌರ್ಜನ್ಯದಿಂದಲೇ ತಮ್ಮ ಸ್ನೇಹಿತ ಮೃತಪಟ್ಟಿದ್ದಾನೆ. ಪೊಲೀಸರು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿ ಆಫ್ರಿಕನ್ ಪ್ರಜೆಗಳು ಜೆ.ಸಿ ನಗರ ಠಾಣೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement