ವಾಣಿಜ್ಯ ಬಳಕೆ ಅನಿಲ ಸಿಲಿಂಡರ್ ದರ ಹೆಚ್ಚಳ..!

ನವದೆಹಲಿ:   ಅನಿಲ ಬಳಕೆದಾರರಿಗೆ ಸರಕಾರ ಮತ್ತೆ ಶಾಕ್ ನೀಡಿದ್ದು ಈ ಬಾರಿ ವಾಣಿಜ್ಯ ಬಳಕೆ  ಅನಿಲ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. ಆದರೆ, ಗೃಹ ಬಳಕೆ ಸಿಲಿಂಡರ್ ದರ ಹೆಚ್ಚಳ ಮಾಡಿಲ್ಲ.

ಪ್ರತಿ ತಿಂಗಳ ಮೊದಲ ದಿನ ಸಾಮಾನ್ಯವಾಗಿ ತೈಲಕಂಪನಿಗಳು ಅಡುಗೆ ಅನಿಲ ದರ ಪರಿಷ್ಕರಿಸುತ್ತವೆ. ೧೯ ಕೆಜಿಯ ವಾಣಿಜ್ಯ ಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ೭೩.೫೦ ರೂ. ಹೆಚ್ಚಳ ಮಾಡಲಾಗಿದೆ. ಗೃಹಬಳಕೆ ೧೪.೨ ಕೆಜಿ ಅಡುಗೆ ಅನಿಲ ಸಿಲಿಂಡರ್ ದರವನ್ನು ಹೆಚ್ಚಳ ಮಾಡಿಲ್ಲ.

ವಾಣಿಜ್ಯ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಚೆನ್ನೈನಲ್ಲಿ ಗರಿಷ್ಠ ೧೭೬೧ ರೂಪಾಯಿಗೆ ತಲುಪಿದೆ. ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ರಾಜ್ಯವಾರು ಅಲ್ಪ ಬದಲಾವಣೆಯಾಗಲಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಒಳ್ಳೆಯ ಸುದ್ದಿ...| ಈ ವರ್ಷ ವಾಡಿಕೆಗಿಂತ ಮೊದಲೇ ಆಗಮಿಸಲಿದೆ ಮುಂಗಾರು ಮಳೆ...

ನಿಮ್ಮ ಕಾಮೆಂಟ್ ಬರೆಯಿರಿ

advertisement