ಕರ್ನಾಟಕದಲ್ಲಿ ಮಂಗಳವಾರ 1674 ಜನರಿಗೆ ಕೊರೊನಾ ಸೋಂಕು, ಮೂರು ಜಿಲ್ಲೆಗಳಲ್ಲಿ ಶೂನ್ಯ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 1674 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೇ ಸಮಯದಲ್ಲಿ 38 ಸೋಂಕಿತರು ಮೃತಪಟ್ಟಿದ್ದಾರೆ ಹಾಗೂ 1376 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,09,958 ಕ್ಕೆ ಏರಿಕೆಯಾಗಿದೆ. ಇದುವರೆಗೆ 36,650 ಸೋಂಕಿತರು ಮೃತಪಟ್ಟಿದ್ದಾರೆ. 28,49,003 ಸೋಂಕಿತರು ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.38 ರಷ್ಟು ಇದೆ. ರಾಜ್ಯದಲ್ಲಿ 24,280 ಸಕ್ರಿಯ ಪ್ರಕರಣಗಳು ಇವೆ.
ರಾಜಧಾನಿ ಬೆಂಗಳೂರಿನಲ್ಲಿ 477 ಜನರಿಗೆ ಕೊರೋನಾ ಪಾಸಿಟಿವ್ ವರದಿ ದೃಢಪಟ್ಟಿದ್ದು, 154 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ.

03-08-2021 HMB Kannada

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ನಿಮ್ಮ ಕಾಮೆಂಟ್ ಬರೆಯಿರಿ

advertisement