ಕರ್ನಾಟಕದಲ್ಲಿ ಸಚಿವ ಸಂಪುಟಕ್ಕೆ ಮುಹೂರ್ತ ಫಿಕ್ಸ್‌: ನಾಳೆ ಮಧ್ಯಾಹ್ನ ಸಚಿವರ ಪ್ರಮಾಣ ವಚನ..!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆಗೆ ಮುಹೂರ್ತ ಕೊನೆಗೂ ನಿಗದಿಯಾಗಿದೆ. ಆಗಸ್ಟ್​ 4ರ (ಬುಧವಾರ) ನಾಳೆ ಮಧ್ಯಾಹ್ನ 2:15ರ ಸುಮಾರಿಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಈಗಾಗಲೇ ಹೈಕಮಾಂಡ್​ನಿಂದ ಪಟ್ಟಿ ರವಾನೆಯಾಗಿದ್ದು, 24 ರಿಂದ 26 ಶಾಸಕರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.
ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿ, ಹಸ್ತಾಂತರವಾಗುವವರೆಗೆ ದೆಹಲಿಯಲ್ಲಿಯೇ ಇರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್​ ಸೂಚನೆ ನೀಡಿದೆ ಎಂಬ ಕಾರಣಕ್ಕೆ ಬೊಮ್ಮಾಯಿ ದೆಹಲಿಯಲ್ಲಿ ಮಂಗಳವಾರ ಉಳಿದಿದ್ದು, ಬುಧವಾರ ಬೆಳಿಗ್ಗೆಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಕರ್ನಾಟಕ ರಾಜ್ಯದ ನೂತನ ಸಚಿವ ಸಂಪುಟದ ಪಟ್ಟಿ ಕೊನೆಗೂ ಅಂತಿಮಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಷ್ಟ್ರೀಯ ಘಟಕದ ನಾಯಕರು ಸುದೀರ್ಘ ಸಮಾಲೋಚನೆಯ ನಂತರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರ ಶಿಗ್ಗಾಂವಿ ಶಾಸಕ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದರು. ಆದರೆ ಸಚಿವ ಸಂಪುಟ ರಚನೆ ಕಗ್ಗಂಟಾಗಿಯೇ ಉಳಿದಿತ್ತು.
ಮಂಗಳವಾರ ರಾತ್ರಿ ಬಿಜೆಪಿ ಹೈಕಮಾಂಡ್ ಸಂಪುಟ ರಚನೆಗೆ ಹಸಿರು ನಿಶಾನೆ ತೋರಿಸಿದ್ದು ಪ್ರಮಾಣ ವಚನ ಸ್ವೀಕಾರ ಸಮಾರಂಭ ಆಗಸ್ಟ್ 4ರಂದು ಮಧ್ಯಾಹ್ನ 2:15ರ ಸುಮಾರಿಗೆ ಪ್ರಮಾಣ ವಚನ ಸ್ವೀಕಅರ ಸಮಾರಂಭ ನಡೆಯಲಿದೆ ಎನ್ನಲಾಗಿದೆ. ಇದರಲ್ಲಿ ಎಂಟರಿಂದ ಹನ್ನೆರಡು ಹೊಸ ಮುಖುಗಳಿಗೆ ಮಣೆ ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಉಪಮುಖ್ಯಮಂತ್ರಿಗಳ ಹುದ್ದೆ ಇರುತ್ತದೆಯಾ ? ಇದ್ದರೆ ಎಷ್ಟು ಎನ್ನುವುದು ಸ್ಪಷ್ಟವಾಗುತ್ತಿಲ್ಲ.

ಪ್ರಮುಖ ಸುದ್ದಿ :-   ಸವದತ್ತಿ | ಸಿಡಿಲು ಬಡಿದು ಇಬ್ಬರು ಸಾವು

ಈ ಕುರಿತು ದೆಹಲಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮಮಾಯಿ ಒಂದೆರಡು ವಿಷಯಗಳ ಬಿಟ್ಟರೆ ಬಹುತೇಕ ಎಲ್ಲವೂ ಅಂತಿಮವಾಗಿದೆ. ನಾಳೆ ಬೆಳಿಗ್ಗೆ ಅಂತಿಮಪಟ್ಟಿ ಪ್ರಕಟವಾಗಬಹುದು. ನಾಳೆ ಬೆಳಿಗ್ಗೆ ಬೇಗ ಪಟ್ಟಿ ಅಂತಿಮಗೊಂಡರೆ ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಉಪಮುಖ್ಯಮಂತ್ರಿಗಳ ಕುರಿತು  ಇನ್ನೂ ಸ್ಪಷ್ಟವಾಗಬೇಕಿದೆ. ಬೆಳಿಗ್ಗೆ ಬೇಗ ಪಟ್ಟಿ ಅಂತಿಮಗೊಂಡರೆ ಬೆಳಿಗ್ಗೆಯೇ ರಾಜ್ಯಪಾಲರಿಗೆ ಪಟ್ಟಿ ಕಳುಹಿಸಿ ಕೊಡಲಾಗುತ್ತದೆ ಎಂದು ಹೇಳಿದರು.
ಹಳಬರು ಮತ್ತು ಹೊಸಬರ ಹದವರಿದ ಮಿಶ್ರಣ ಸಂಪುಟದಲ್ಲಿ ಇರಲಿದ್ದು, ಹಲವು ಹಿರಿಯರಿಗೆ ಸಚಿವ ಸ್ಥಾನ ಕೈತಪ್ಪುವ ಸಾಧ್ಯತೆ ಹೆಚ್ಚಿದೆ. ಜಾತಿ ಮತ್ತು ಪ್ರಾದೇಶಿಕ ಪ್ರಾತಿನಿಧ್ಯಕ್ಕೆ ಬಿಜೆಪಿ ಹೆಚ್ಚು ಗಮನ ನೀಡಲಾಗಿದೆ ಎನ್ನಲಾಗಿದ್ದು. ಇದರ ಜೊತೆಗೆ 2023ರ ಕರ್ನಾಟಕ ವಿಧಾನಸಭೆ ಮತ್ತು 2024ರ ಲೋಕಸಭೆ ಚುನಾವಣೆಗೆ ಪಕ್ಷವನ್ನು ಬಲಪಡಿಸುವ ಉದ್ದೇಶವನ್ನು ಹೊಸ ಸಂಪುಟ ರಚನೆಗೆ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement