ನಾಳೆಯಿಂದ ಆರಂಭವಾಗಬೇಕಿದ್ದ ಕರ್ನಾಟಕ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಾಳೆಯಿಂದ (ಆಗಸ್ಟ್‌ 4) ಪ್ರಾರಂಭವಾಗಬೇಕಿದ್ದ ಪದವಿ ತರಗತಿಗಳ ಪ್ರವೇಶ ಪ್ರಕ್ರಿಯೆ ಮುಂದೂಡಲಾಗಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆಯನ್ನು ಆಗಸ್ಟ್‌ 4ರಿಂದ ಪ್ರಾರಂಭಿಸಲು ಕಾಲೇಜು ಶಿಕ್ಷಣ ಇಲಾಖೆ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು.ಆದರೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದ ವರೆಗೆ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಸೂಚಿಸಿ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸುವ ದಿನಾಂಕ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ಪದವಿ ತರಗತಿಗಳ ಪ್ರವೇಶವನ್ನು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್) ಮೂಲಕ ನಡೆಸಲು ತೀರ್ಮಾನಿಸಲಾಗಿತ್ತು. ಈ ಸಂಬಂಧ ಕಾಲೇಜು ಶಿಕ್ಷಣ ಇಲಾಖೆಯು ಮಾರ್ಗಸೂಚಿ ಹೊರಡಿಸಿತ್ತು.
ಎಲ್ಲ ಸಾರ್ವಜನಿಕ ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಸಂಯೋಜಿತ ಕಾಲೇಜುಗಳಲ್ಲಿ ಉನ್ನತ ಶಿಕ್ಷಣ ಇಲಾಖೆಯು ಇ-ಆಡಳಿತ ಇಲಾಖೆಯ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‍ರವರ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಪ್ರವೇಶಾತಿ ಘಟಕವನ್ನು ಅಭಿವೃದ್ಧಿಪಡಿಸಲಾಗಿತ್ತು. ಪ್ರಸಕ್ತ ಸಾಲಿನ ಪ್ರವೇಶಾತಿ ಪ್ರಕ್ರಿಯೆಯನ್ನು https://uucms.karnataka.gov.in ಮೂಲಕ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿತ್ತು.ಆದರೆ ಈಗ ಸರ್ಕಾರ ನಿರ್ಧಾರ ಬದಲಿಸಿದ್ದು, ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆಯನ್ನು ಮುಂದೂಡಲಾಗಿದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement