ಹಾವೇರಿ: ಶಾಸಕ ಓಲೇಕಾರಗೆ ಸಚಿವ ಸ್ಥಾನ ನೀಡಲು ಪಟ್ಟುಹಿಡಿದು ನೀರಿನ ಟ್ಯಾಂಕ್ ಏರಿದ ಅಭಿಮಾನಿಗಳು…!!

ಹಾವೇರಿ:ರಾಜ್ಯದಲ್ಲಿ ಸಿಎಂ ಬದಲಾವಣೆ ಸರ್ಕಸ್ ಬಳಿಕ  ಸಂಪುಟ ರಚನೆ ಕಸರತ್ತು ಜೋರಾಗಿದೆ. ಶಾಸಕರು ದೆಹಲಿಗೆ ದೌಡಾಯಿಸಿ ಮಂತ್ರಿ ಸ್ಥಾನಕ್ಕೆ ಲಾಭಿ ನಡೆಸಿದ್ದರೇ, ಹಾವೇರಿ ಶಾಸಕರ ಅಭಿಮಾನಿಗಳು ನೀರಿನ ಟ್ಯಾಂಕ್ ಏರಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಹಾವೇರಿ ಶಾಸಕ ನೆಹರು ಓಲೇಕಾರಗೆ ಸಚಿವ ಸ್ಥಾನ ನೀಡುವಂತೆ ಒತ್ತಯಿಸಿ ಇಬ್ಬರು ಅಭಿಮಾನಿಗಳು ನೀರಿನ ಟ್ಯಾಂಕ್ ಏರಿ ಸಾರ್ವಜನಿಕರ ಗಮನ ಸೆಳೆದ ಘಟನೆ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದ ಬಳಿ ನಡೆದಿದೆ.
ಇವರು ಜಿಲ್ಲೆಯ ಸವಣೂರು ತಾಲೂಕಿನ ಹತ್ತಿಮತ್ತೂರು ಗ್ರಾಮದ ನಿವಾಸಿಗಳು ಎನ್ನಲಾಗಿದೆ.
ಶಾಸಕ ಓಲೇಕಾರ ಪರ ಘೋಷಣೆ ಕೂಗಿದ ಇವರು ಬಿಜೆಪಿ ಬಾವುಟ ಹಿಡಿದು, ಟ್ಯಾಂಕ್ ಮೇಲೆ ನಿಂತು ನೆಹರು ಓಲೇಕಾರ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ. ಸಚಿವ ಸ್ಥಾನ ನಿಡುವ ವರೆಗೂ ನೀರಿನ ಟ್ಯಾಂಕ್ ನಿಂದ ಕೆಳಗೆ ಇಳಿಯುವುದಿಲ್ಲ ಎಂದು ಪಟ್ಟು ಹಿಡಿದರು. ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಹಾವೇರಿ ನಗರ ಠಾಣೆ ಪೊಲೀಸರು ಟ್ಯಾಂಕ್ ನಿಂದ ಇಳಿಯುವಂತೆ ಅವರಿಬ್ಬರ ಮನವೊಲಿಕೆ ಮಾಡಿದರು. ತಹಶೀಲ್ದಾರ್ ಗಿರೀಶ್ ಸ್ವಾದಿ
ಭೇಟಿ ನೀಡಿ ಮನವೊಲಿಕೆ ಮಾಡಿದ ನಂತರ ಟ್ಯಾಂಕ್‍ನಿಂದ ಇಬ್ಬರು ಕೆಳಗೆ ಇಳಿದರು. ತಹಶೀಲ್ದಾರ್ ಗಿರೀಶ್ ಸ್ವಾದಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಮನವಿ ಸಲ್ಲಿಸಿ ಓಲೇಕಾರ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದರು.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement