ಬೊಮ್ಮಾಯಿ ಸಚಿವ ಸಂಪುಟದಲ್ಲಿ 13 ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಇಲ್ಲ..!

ಬೆಂಗಳೂರು: ಪ್ರಾದೇಶಿಕ ಸಮತೋಲನ ಹಾಗೂ ಜಾತಿವಾರು ಪ್ರಾತಿನಿಧ್ಯಕ್ಕೆ ಒತ್ತು ನೀಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ 13 ಜಿಲ್ಲೆಗಳಿಗೆ ಸಚುವ ಸಂಪುಟದಲ್ಲಿ ಪ್ರಾತಿನಿಧ್ಯವೇ ಇಲ್ಲ..!
ಮೈಸೂರು, ಕಲಬುರಗಿ, ರಾಮನಗರ, ಕೊಡಗು, ರಾಯಚೂರು, ಹಾಸನ, ವಿಜಯಪುರ,   ದಾವಣಗೆರೆ, ಕೋಲಾರ, ಯಾದಗಿರಿ, ಚಿಕ್ಕಮಗಳೂರು,ಚಾಮರಾಜ ನಗರ ಜಿಲ್ಲೆಗಳಿಗೆ ಸಂಪುಟದಲ್ಲಿ ಸ್ಥಾನಮಾನ ಸಿಕ್ಕಿಲ್ಲ. ಕೇವಲ 18 ಜಿಲ್ಲೆಗಳಿಗೆ ಮಾತ್ರ ಮಣೆ ಹಾಕಲಾಗಿದೆ. ಕೆಲವು ಜಿಲ್ಲೆಗಳಿಗೆ ಸಿಂಹಪಾಲು ನೀಡಲಾಗಿದೆ.
ಬಿಜೆಪಿಯ ಭದ್ರಕೋಟೆ ಜಿಲ್ಲೆಗಳಾದ ಚಿಕ್ಕಮಗಳೂರಿನಲ್ಲಿ ನಾಲ್ವರು, ದಾವಣಗೆರೆ 5, ಬಳ್ಳಾರಿ 2, ಮೈಸೂರು 3, ಕೊಡಗು 2, ವಿಜಯಪುರ, ಯಾದಗಿರಿ ತಲಾ ಮೂವರು ಶಾಸಕರು ಇದ್ದರು ಕೂಡ ಈ ಜಿಲ್ಲೆಗಳಿಗೆ ಸ್ಥಾನಮಾನ ನೀಡದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ಅದರಲ್ಲೂ ಈ ಬಾರಿ ಸಂಪುಟದಲ್ಲಿ ಮಧ್ಯಕರ್ನಾಟಕ ರಾಜಧಾನಿ ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಿಗೆ ಪ್ರಾಶಸ್ತ್ಯ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ, ನಿರೀಕ್ಷೆ ಹುಸಿಯಾಗಿದೆ. ಉಳಿದಂತೆ 6 ಜಿಲ್ಲೆಗಳಿಂದ ತಲಾ ಇಬ್ಬರು ಶಾಸಕರಿಗೆ ಮಣೆ ಹಾಕಲಾಗಿದೆ. ಬೆಳಗಾವಿ, ಹಾವೇರಿ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಉಡುಪಿ ಜಿಲ್ಲೆಗಳಿಗೆ ಎರಡು ಸ್ಥಾನವನ್ನು ಕೊಡಲಾಗಿದೆ. ಬೆಂಗಳೂರಿಗೆ ಸಿಂಹಪಅಲು ಅಂದರೆ ಎಂಟು ಜನರಿಗೆ ಸಚಿವ ಸ್ಥಾನ ನೀಡಲಾಗಿದೆ. ಹೀಗಾಗಿ ಕಲಬುರಗಿ, ರಾಯಚೂರು, ವಿಜಯಪುರ, ದಾವಣಗೆರೆ, ಮೈಸೂರಿನಂತಹ ದೊಡ್ಡ ಜಿಲ್ಲೆಗಳಿಗೂ ಪ್ರಾತಿನಿಧ್ಯವೇ ಸಿಕ್ಕಿಲ್ಲ. ಆದರೆ ಹಾವೃಇಯಮಥ ಸಣ್ಣ ಜಿಲ್ಲೆಗಳಿಗೆ ಮುಖ್ಯಮಂತ್ರಿ ಸೇರಿದಂತೆ ಇಬ್ಬರಿಗೆ ಪ್ರಾತಿನಿಧ್ಯ ಸಿಕ್ಕಿದೆ

ಪ್ರಮುಖ ಸುದ್ದಿ :-   ಗೋಕರ್ಣ : ಸಮುದ್ರದ ಅಲೆಗೆ ಸಿಲುಕಿದ್ದ ಮೂವರು ಪ್ರವಾಸಿಗರ ರಕ್ಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement