ತಮ್ಮ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದ ಮೂವರು ಮಂತ್ರಿಯಾಗದಂತೆ ನೋಡಿಕೊಂಡ ಯಡಿಯೂರಪ್ಪ

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದ ವಿರುದ್ಧ ಸಡ್ಡು ಹೊಡೆದಿದ್ದ ಪ್ರಮುಖ ಮೂವರಿಗೆ ಮಂತ್ರಿ ಸ್ಥಾನ ಕೈ ತಪ್ಪಿದೆ.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ, ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ತಪ್ಪಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.
ಈ ಮೂವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಳಾಗುತ್ತಾರೆ ಎಂಬ ನಿರೀಕ್ಷೆ ಮಾಡಲಾಗಿತ್ತು. ಅದರಲ್ಲೂ ವೀರಶೈವ ಲಿಂಗಾಯಿತ ಪಂಚಮಸಾಲಿ ಸಮುದಾಯದಿಂದ ಅರವಿಂದ ಬೆಲ್ಲದ ಉಪಮುಖ್ಯಮಂತ್ರಿಗಳಾಗುತ್ತಾರೆ ಎಂಬ ವದಂತಿಯೂ ಕೇಳಿ ಬಂದಿತ್ತು.
ಒಂದು ವೇಳೆ ಬಸವನಗೌಡ ಪಾಟೀಲ ಯತ್ನಾಳ, ಸಿ.ಪಿ.ಯೋಗೇಶ್ವರ, ಅರವಿಂದ್ ಬೆಲ್ಲದ ಅವರನ್ನು ಸಂಪುಟಕ್ಕೆ ತೆಗೆದುಕೊಂಡರೆ ನಮ್ಮ ಪುತ್ರ ಬಿ.ವೈ.ವಿಜಯೇಂದ್ರನನ್ನು ಸಂಪುಟಕ್ಕೆ ತೆಗೆದುಕೊಳ್ಳುವುದರ ಜೊತೆಗೆ ಡಿಸಿಎಂ ಸ್ಥಾನಮಾನ ನೀಡಬೇಕೆಂದು ಯಡಿಯೂರಪ್ಪ ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದರು. ಎಂದು ಹೇಳಲಾಗುತ್ತಿದೆ. ಹೀಗಾಗಿ ಹೈಕಮಾಂಡ್‌ ಈ ಮೂವರಿಗೂ ಸಚಿವ ಸ್ಥಾನ ನೀಡದೆ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳುವುದು ಬೇಡ ಎಂಬ ತೀರ್ಮಾನ ತೆಗೆದುಕೊಂಡಿದೆ. ಹೀಗಾಗಿಯೇ ಕೊನೆ ಕ್ಷಣದದಲ್ಲಿ ವರಿಷ್ಠರು ಯಡಿಯೂರಪ್ಪ ವಿರೋಧಿ ಬಣದಲ್ಲಿದ್ದ ಈ ಮೂವರನ್ನು ಸಂಪುಟಕ್ಕೆ ಪರಿಗಣಿಸಿಲ್ಲ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement