ಅಧಿಕೃತವಾಗಿ ಕಮಲದ ಪಕ್ಷ ಸೇರಿದ ಬಿಎಸ್‌ಪಿ ಉಚ್ಚಾಟಿತ ಶಾಸಕ ಎನ್.ಮಹೇಶ

ಚಾಮರಾಜನಗ: ಕೊಳ್ಳೇಗಾಲದ ಬಿಎಸ್ಪಿ ಉಚ್ಚಾಟಿತ ಶಾಸಕ ಎನ್.ಮಹೇಶ್ ಇಂದು (ಗುರುವಾರ) ಕಮಲಪಾಳಯಕ್ಕೆ ಸೇರಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿ ಶಾಸಕ ಎನ್. ಮಹೇಶ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಮೂರು ಬಾರಿ ಸೋತರೂ ಧೃತಿಗೆಡದೆ ಕಳೆದ ಇಪ್ಪತ್ತು ವರ್ಷಗಳಿಂದ ತಮ್ಮ ಹೋರಾಟದ ಮೂಲಕವೇ ಬಿಎಸ್ಪಿಯನ್ನು ಸಂಘಟಿಸಿದ್ದ ಎನ್. ಮಹೇಶ್ ಆ ಪಕ್ಷದ ರಾಜ್ಯಾಧ್ಯಕ್ಷರೂ ಆಗಿದ್ದರು. ಕೊನೆಗೂ 2018 ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಗೆಲವು ಸಾಧಿಸುವ ಮೂಲಕ ವಿಧಾನಸಭೆಯಲ್ಲಿ ಬಿಎಸ್ಪಿ ಖಾತೆ ತೆರೆದಿದ್ದರು.
ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾಗಿದ್ದ ಅವರು ಕೆಲ ತಿಂಗಳ ನಂತರ ಬಿಎಸ್ಪಿ ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
2019 ರ ಜುಲೈ 23 ರಂದು ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡುವ ಸಂದರ್ಭ ಬಂದಾಗ ಮಹೇಶ್ ಸದನಕ್ಕೆ ಗೈರು ಹಾಜರಾಗಿದ್ದರು. ಸದನಕ್ಕೆ ಹಾಜರಾಗಿ ಮೈತ್ರಿ ಸರ್ಕಾರದ ಪರ ಮತ ಚಲಾಯಿಸುವಂತೆ ಸ್ವತಃ ಬಿಎಸ್ಪಿ ಅಧಿನಾಯಕಿ ಮಾಯಾವತಿ ಟ್ವೀಟ್ ಮಾಡಿ ಸೂಚಿಸಿದ್ದರು. ಆದರೆ ಅಂದು ತಾವು ಆಶ್ರಮವೊಂದರಲ್ಲಿ ಧ್ಯಾನದಲ್ಲಿದ್ದ ಕಾರಣ ಹಾಗೂ ನೆಟ್ ವರ್ಕ್ ಸಮಸ್ಯೆಯಿಂದ ಮಾಯಾವತಿ ಅವರ ಸೂಚನೆ ತಮಗೆ ಗೊತ್ತಾಗಲಿಲ್ಲ ಎಂಬ ಕಾರಣವನ್ನು ಮಹೇಶ್ ನೀಡಿದ್ದರು. ಆ ಮೂಲಕ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪರೋಕ್ಷವಾಗಿ ಸಹಕಾರ ನೀಡಿದ್ದರು.
ಪಕ್ಷದ ಆದೇಶ ಉಲ್ಲಂಘಿಸಿದ ಆರೋಪದ ಮೇರೆಗೆ ಅವರನ್ನು ಬಿಎಸ್ಪಿಯಿಂದ ಉಚ್ಛಾಟಿಸಲಾಗಿತ್ತು. ಅವರು ಕಾಂಗ್ರೆಸ್​ನತ್ತವೂ ಕೂಡ ತಮ್ಮ ಚಿತ್ತ ಹರಿಸಿದ್ದರು. ಆದರೆ ಅಲ್ಲಿ ತೀವ್ರ ಪೈಪೋಟಿ ಇರುವುದರಿಂದ ತಮಗೆ ಅಲ್ಲಿ ಭವಿಷ್ಯವಿಲ್ಲ ಎಂದರಿತ ಮಹೇಶ್ ತಮ್ಮ ಮುಂದಿನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಸೇರುವುದೇ ಸೂಕ್ತ ಎಂದು ತೀರ್ಮಾನಕ್ಕೆ ಬಂದಿದ್ದರು. ನಿರ್ಧರದಮತೆ ಇಂದು ಬಿಜೆಪಿ ಸೇರಿದ್ದಾರೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement