ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
2018ರಲ್ಲಿ ನಡೆದ ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ರೋಷನ್ ಬೇಗ್ ಅವರನ್ನು ಸಿಬಿಐ ನವೆಂಬರ್ 22ರಂದು ಬಂಧಿಸಿತ್ತು. ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಖಾನ್‌ನಿಂದಅಪಾರ ಮೊತ್ತದ ಹಣ ಪಡೆದ ಆರೋಪ ರೋಷನ್ ಬೇಗ್ ಮೇಲಿದೆ.
ತಮ್ಮೊಂದಿಗೆ ವ್ಯವಹಾರ ನಡೆಸಿದ ರೋಷನ್ ಬೇಗ್ ಅವರ ಮಾತುಕತೆಯ ಆಡಿಯೋವನ್ನು ಖುದ್ದು ಮನ್ಸೂರ್ ಖಾನ್‌ ನಗರ ಪೊಲೀಸ್ ಆಯುಕ್ತರಿಗೆ ರವಾನೆ ಮಾಡಿದ್ದರು. ಐಎಂಎ ವಂಚನೆ ಪ್ರಕರಣವನ್ನು ವಿಶೇಷ ತನಿಖಾ ತಂಡ ತನಿಖೆಗೆ ಕೈಗೆತ್ತಿಕೊಂಡಿತ್ತು. ಈ ವೇಳೆಯೇ ರೋಷನ್ ಬೇಗ್ ವಿಚಾರಣೆಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮುಂದಾಗಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement