ಮಾಜಿ ಸಚಿವ, ಶಾಸಕ ಜಮೀರ್‌ ಆಹ್ಮದ್‌ ಮನೆ, ಕಚೇರಿ ಮೇಲೆ ಐಟಿ ಅಲ್ಲ, ಇಡಿ ದಾಳಿ..!

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಎಂಬ ಖಚಿತ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಆರಂಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದಲೇ ದಾಳಿ ನಡೆದಿದೆ ಎಂಬಂತೆ ಇಡೀ ಪ್ರಕರಣ ಬಿಂಬಿತವಾಗಿತ್ತು. ಇದೀಗ ಜಾರಿ ನಿರ್ದೇಶನಾಲಯ ಜಮೀರ ಅಹ್ಮದ್ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ.
ಐಎಂಎ ಪ್ರಕರಣ ಸಂಬಂಧ ಜಮೀರ್ ಅಹ್ಮದ್ ಖಾನ್ ಮನೆ ಸೇರಿದಂತೆ ಒಟ್ಟು 6 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಐಎಂಎ ಪ್ರಕರಣದಲ್ಲಿ ಜಮೀರ್ ಅಹ್ಮದ್ ಹೆಸರು ಬಲವಾಗಿ ಕೇಳಿ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ವಿಚಾರಣೆಗೆ ಹಾಜರಾಗಿದ್ದರು. ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿವೆ. ಇಡಿ ವಶದಲ್ಲಿರುವ ಜಮೀರ್ ಅಹ್ಮದ್ ವಿಚಾರಣೆ ನಡೆಸಲಾಗುತ್ತಿದೆ.
ಮನ್ಸೂರ್ ಅಲಿ ಖಾನ್ ಗೆ ಜಮೀರ್ ಅಹ್ಮದ್ ಖಾನ್ ಬೆಂಗಳೂರಿನ ಪ್ರತಿಷ್ಠಿತ ಏರಿಯಾದಲ್ಲಿಯ ನಿವೇಶನ ಮಾರಾಟ ಮಾಡಿದ್ದರು. ಶಾಸಕರಾಗಿರುವ ಜಮೀರ್ ಅಹ್ಮದ್ ವಿದೇಶದಲ್ಲಿ ಕ್ಯಾಸಿನೋ ಬಾರ್ ಗಳು, ಸೇರಿದಂತೆ ಬೇರೆ ಬೇರೆ ವ್ಯವಹಾರಗಳು ನಡೆಸ್ತಿರೊ ಬಗ್ಗೆ ಮಾಹಿತಿ ಐಟಿ ಇಲಾಖೆಗೆ ಲಭ್ಯವಾಗಿದ್ದ ಎನ್ನಲಾಗಿದೆ.
ಚಾಮರಾಜಪೇಟೆಯಲ್ಲಿರುವ ಶಾಸಕರ ಕಚೇರಿ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣ ಬಳಿಯಿರುವ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆದಿದೆ.
ಅಧಿಕಾರಿಗಳು ಬೆಳಗ್ಗೆ 5. 45ಕ್ಕೆ ಜಮೀರ್ ಮನೆಗೆ ಆಗಮಿಸಿದ್ದಾರೆ. ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಜಮೀರ್ ಅಹ್ಮದ್ ಮನೆ ಹಾಗೂ ಫ್ಲಾಟ್​​ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ.
ಜಮೀರ್ ಅಹ್ಮದ್ ಖಾನ್ ಇತ್ತೀಚೆಗಷ್ಟೇ ಭವ್ಯವಾದ ಮನೆಯನ್ನು ಕಟ್ಟಿಸಿದ್ದರು. ಟ್ರಾವೆಲ್ಸ್ ಹೊರತುಪಡಿಸಿ ಜಮೀರ್ ಅಹಮದ್ ಅವರ ಇನ್ನಿತರ ವ್ಯವಹಾರಗಳ ಬಗ್ಗೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ (Chamrajpet) ಶಾಸಕ ಜಮೀರ್ ಅಹ್ಮದ್ (Zameer Ahmed Khan ) ಅವರ ಬೆಂಗಳೂರಿನ ಮನೆಯ ಮೇಲೆ ಬೆಳಗ್ಗೆ 6 ಗಂಟೆಗೆ ಐಟಿ ದಾಳಿ ನಡೆದಿದೆ. ಸುಮಾರು 15 ಮಂದಿ ಇಡಿ ಅಧಿಕಾರಿಗಳು 2 ಗಂಟೆಗಳಿಂದ ಸತತವಾಗಿ ಪರಿಶೀಲನೆ ನಡೆಸುತ್ತಿದ್ದಾರೆ.
ಜಮೀರ್ ಅಹ್ಮದ್ ಖಾನ್ ಗೆ ಸಂಬಂಧಿಸಿದ ಕಚೇರಿ, ಮನೆ ಹಾಗೂ ಪ್ಲಾಟ್ ಗಳ ಮೇಲೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಆದಾಯ ವಿವರ, ಹೂಡಿಕೆ, ಸಂಪಾದನೆ ಆಸ್ತಿ ಮೊದಲ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಪೊಲೀಸ್ ಭದ್ರತೆಯೊಂದಿಗೆ ಏಕಕಾಲದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೆಚ್ಚಿನ ವಿವರ ತಿಳಿದುಬರಬೇಕಿದೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement