ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡಿನಲ್ಲಿ ಅಣ್ಣಾಮಲೈ ಉಪವಾಸ

ತಂಜಾವೂರು: ಕರ್ನಾಟಕದ ಮೇಕೆದಾಟು ಆಣೆಕಟ್ಟು ಯೋಜನೆಯನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ನೇತೃತ್ವದಲ್ಲಿ ರೈತರು ತಂಜಾವೂರಿನಲ್ಲಿ ಇಂದು ಒಂದು ದಿನದ ಉಪವಾಸ ಸತ್ಯಗ್ರಹ ನಡೆಸಿದರು. ರೈತರೊಂದಿಗೆ ಎತ್ತಿನಗಾಡಿಯಲ್ಲಿ ನಿರಶನ ಸ್ಥಳಕ್ಕೆ ಆಗಮಿಸಿದರು.
ನಿರಶನದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಮುಂದಾಗಿದ್ದು ಇದು ನ್ಯಾಯಸಮ್ಮತವಲ್ಲ. ಕರ್ನಾಟಕ ಸರ್ಕಾರವು ಈ ಯೋಜನೆಯನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಪರ ನಿಲುವು ವ್ಯಕ್ತಪಡಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ವಿವಾದಕ್ಕೆ ಕಾರಣವಾಗಿರುವ ಮೇಕೆದಾಟು ಆಣೆಕಟ್ಟು ಯೋಜನೆ ಬೃಹತ್ ಹೋರಾಟದ ಸ್ವರೂಪ ಪಡೆಯುತ್ತಿದೆ. ಉಭಯ ರಾಜ್ಯಗಳಲ್ಲಿ ಇಂದು ಪರ ಮತ್ತು ವಿರೋಧ ಪ್ರತಿಭಟನೆಗಳು ನಡೆದವು.
ಈ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕದಲ್ಲಿ ರೈತ ಸಮುದಾಯ, ವಿವಿಧ ಸಂಘಸಂಸ್ಥೆಗಳು ಮತ್ತು ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿವೆ.
ಹಾಗೂ ರಾಜ್ಯದ ಪ್ರತಪಕ್ಗಳು ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿವೆ.

ಪ್ರಮುಖ ಸುದ್ದಿ :-   ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement