ರಾಜ್ಯದ ಎಸ್.ಎಸ್.ಎಲ್.ಸಿ. ಫಲಿತಾಂಶ ನಾಳೆಯೇ ಪ್ರಕಟ…!

posted in: ರಾಜ್ಯ | 1

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ವಿಳಂಭವಾಗಿ ನಡೆದಿರುವ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಾಳೆಯೇ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು  ಎಸ್.ಎಸ್.ಎಲ್.ಸಿ. ನಿರ್ದೇಶಕಿ ವಿ. ಸುಮಂಗಲ ತಿಳಿಸಿದ್ದಾರೆ.

ಗುರುವಾರ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸದಸ್ಯರ ಸಭೆ ನಡೆಸಿದ್ದು ಸಭೆಯಲ್ಲಿ ಫಲಿತಾಂಶ ಪ್ರಕಟಿಸಲು ಸದಸ್ಯರು ಒಪ್ಪಿಗೆ ಸೂಚಿಸಿದ್ದಾರೆ. ಈ ಸಭೆಯ ನಡಾವಳಿಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಕಳುಹಿಸಿಕೊಟ್ಟಿದ್ದು, ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಫಲಿತಾಂಶಕ್ಕೆ ಪ್ರಕಟಿಸಲು ಅನುಮತಿ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಶನಿವಾರ ಆ.೭ ರಂದು ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ೮.೭೬ ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರದಿದ್ದು, ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಕೇವಲ ಎರಡು ದಿನಗಳಲ್ಲಿ ಸಾಕಷ್ಟು ಮುಂಜಾಗೃತೆಯಿಂದಲೇ ನಡೆಸಲಾಗಿತ್ತು.

 

 

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement