ಈ ಜಿಲ್ಲೆಗಳಲ್ಲಿ ಆಗಸ್ಟ್ 10ರ ವರೆಗೆ ಗುಡುಗು ಸಹಿತ ಮಳೆ: ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ .ಬಹುತೇಕ ಕರಾವಳಿ , ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನಲ್ಲಿ ಕೆಲವೆಡೆ ಆಗಸ್ಟ್‌ 10ರ ವರೆಗೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ದಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಶನಿವಾರ (ಆ.7ರಂದು) ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂದಿನ ಎರಡು ದಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಶುಕ್ರವಾರ ಸಹಜವಾಗಿದ್ದು, ಕರಾವಳಿ ಜಿಲ್ಲೆಗಳ ಬಹುತೇಕಮತ್ತು ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement