ಚುನಾವಣಾ ರಾಜಕೀಯಕ್ಕೆ ಸಂಸದ ಶ್ರೀನಿವಾಸ ಪ್ರಸಾದ ನಿವೃತ್ತಿ ಘೋಷಣೆ

ಮೈಸೂರು: ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ (V Srinivasa Prasad) ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಇಂದು (ಆಗಸ್ಟ್​ 06) ಅವರ ಜನ್ಮವಾಗಿದ್ದು ಇದೇ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಜೀವನದ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಯೋಜಿಸಲಾಗಿದೆ. ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ. ಆದರೆ ರಾಜಕೀಯ ಬೆಳವಣಿಗೆಗಳು ಬೇರೆ ತಿರುವು ಪಡೆದ ಕಾರಣ ಸ್ಪರ್ಧೆ ಮಾಡಬೇಕಾಯಿತು. ಈಗ ನಾನು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ತೀರ್ಮಾನಿಸಿದ್ದೇನೆ. ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ ಎಂದು ಪ್ರಕಟಿಸಿದ್ದಾರೆ.
ಕಾಂಗ್ರೆಸ್​ನಲ್ಲಿ ಸಿದ್ಧರಾಮಯ್ಯ ಹಾಗೂ ಮತ್ತಿತರರೊಂದಿಗೆ ಮನಸ್ತಾಪ ಉಂಟಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ವಿ.ಶ್ರೀನಿವಾಸ ಪ್ರಸಾದ್ ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದರು. ಇದೇ ಅವರ ಕೊನೆಯ ಚುನಾವಣೆ ಎಂದು ಅವರು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement