ಭಯೋತ್ಪಾದಕರೊಂದಿಗೆ ಸಂಪರ್ಕ: ಭಟ್ಕಳದಲ್ಲಿ ಎನ್‌ಐಎ ದಾಳಿ, ಮೂವರು ವಶಕ್ಕೆ

ಕಾರವಾರ: ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ (ರಾಷ್ಟ್ರೀಯ ತನಿಖಾ ದಳ) ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ದಾಳಿ ನಡೆಸಿದ್ದು ಮೂವರನ್ನು ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ. ಭಟ್ಕಳದ ಉಮರ್ ಸ್ಟ್ರೀಟ್, ತೆಂಗಿನ ಗುಂಡಿ ಹಾಗೂ ಸಾಗರ ರಸ್ತೆಯಲ್ಲಿರುವ ಮನೆಗಳಿಗೆ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು. ಎನ್‌ಇಎ ಮೂವರನ್ನು ವಶಕ್ಕೆ ಪಡೆದಿದೆ ಎನ್ನಲಾಗಿದೆ.
ಭಟ್ಕಳದ ಇಬ್ಬರನ್ನು ತೀವ್ರ ತನಿಖೆ ನಡೆಸುತ್ತಿದ್ದು, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ಈ ಹಿಂದೆ ದುಬೈ ನಲ್ಲಿ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕನೋರ್ನನ ಸಹೋದರನ್ನೂ ಎನ್‍ಐಎ ವಶಕ್ಕೆ ಪಡೆದಿದೆ ಎನ್ನಲಾಗುತ್ತಿದೆ.
ಸ್ಥಳದಲ್ಲಿ ಕೆಎಸ್‍ಆರ್ ಪಿ ತುಕಡಿ ಜಮಾವಣೆ ಮಾಡಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಮೊಕ್ಕಾಂ ಹೂಡಿದ್ದಾರೆ. ವಶಕ್ಕೆ ಪಡೆದವರಿಗೆ ಐಸಿಸ್ ನಂಟಿರುವ ಕುರಿತು ಅಧಿಕಾರಿಗಳಿಂದ ತನಿಖೆ ಮುಂದುವರೆದಿದೆ.
ಜಿಲ್ಲೆಯ ಉನ್ನತ ಪೊಲೀಸ್‌ ಅಧಿಕಾರಿಗಳ ಸಹಯೋಗದಲ್ಲಿ ಎನ್‌.ಐ.ಎ ತಂಡ ಭಟ್ಕಳದಲ್ಲಿ ದಾಳಿ ನಡೆಸಿದೆ. ಈ ಸಂಬಂಧ ಭಟ್ಕಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಉಗ್ರರ ಚಟುವಟಿಕೆಯ ಸಂಪರ್ಕ ಹೊಂದಿದ್ದ ಬಗ್ಗೆ ಹಲವರು ಬಾರಿ ಭಟ್ಕಳ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ವಿಶೇಷವಾಗಿ ರಿಯಾಜ್‌ ಭಟ್ಕಳ ಬಂಧನದ ನಂತರ ಭಟ್ಕಳ ಬಾರಿ ಸುದ್ದಿಯಾಗಿತ್ತು.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement