ಮಹತ್ವದ ನಿರ್ಧಾರ.. ಕರ್ನಾಟಕದ 8 ಜಿಲ್ಲೆಗಳಲ್ಲಿ ಇಂದಿನಿಂದಲೇ ವೀಕೆಂಡ್ ಕರ್ಫ್ಯೂ ಜಾರಿ, ಆ. 23 ರಿಂದ ಶಾಲಾ -ಕಾಲೇಜುಗಳು ಆರಂಭ..!

ಬೆಂಗಳೂರು:ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳದ ಗಡಿಯಲ್ಲಿರುವ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇಂದಿನಿಂದಲೇ ಜಾರಿಯಾಗಲಿದೆ.

ಕೊರೊನಾ ನಿಯಂತ್ರಣ ಸಂಬಂಧ ಸಿಎಂ ಬೊಮ್ಮಾಯಿ ತಜ್ಞರ ಜೊತೆ ಸಭೆ ನಡೆಸಿದ ಬಳಿಕ ಈ ನಿರ್ಧಾರ ಪ್ರಕಟವಾಗಿದೆ. ದಕ್ಷಿಣ ಕನ್ನಡ, ಕೊಡಗು,  ಮೈಸೂರು, ಚಾಮರಾಜನಗರ, ಬೆಳಗಾವಿ,  ಬೀದರ್, ಕಲುಬುರಗಿ, ವಿಜಯಪುರದಲ್ಲಿ ಶನಿವಾರ, ಭಾನುವಾರ ಲಾಕ್‍ಡೌನ್ ಘೋಷಣೆಯಾಗಿದೆ.ರಾಜ್ಯಾದ್ಯಂತ ನೈಟ್ ಕರ್ಫ್ಯೂ ಅವಧಿಯನ್ನು ಹೆಚ್ಚಿಸಲಾಗಿದ್ದು, ರಾತ್ರಿ 10ರ ಬದಲಾಗಿ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಇರಲಿದೆ.

ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ. ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂಗೆ ನಿರ್ಧರಿಸಲಾಗಿದೆ. ಶಾಲೆ ಆರಂಭದ ಬಗ್ಗೆಯೂ ತಜ್ಞರ ಜೊತೆ ಚರ್ಚೆ ನಡೆಸಲಾಗಿದೆ ಎಂದರು.

ಎರಡು ಹಂತದಲ್ಲಿ ಶಾಲಾ, ಕಾಲೇಜುಗಳು ಪ್ರಾರಂಭವಾಗಲಿದೆ. ಮೊದಲ ಹಂತ 9ರಿಂದ 12ನೇ ತರಗತಿವರೆಗೆ ಆಗಸ್ಟ್ 23 ರಿಂದ ಆರಂಭವಾಗಲಿದೆ. ಆಗಸ್ಟ್ ಕೊನೆಯ ವಾರದಲ್ಲಿ ಪರಿಸ್ಥಿತಿ ನೋಡಿಕೊಂಡು 1 ರಿಂದ 8 ತರಗತಿವರೆಗಿನ ಶಾಲೆಗಳನ್ನು ಯಾವಾಗ ಆರಂಭಿಸಬೇಕು ಎಂಬ ತೀರ್ಮಾನ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ.

ಪ್ರಮುಖ ಸುದ್ದಿ :-   ಬೆಳಗಾವಿ; ಟಿಕೆಟ್​ ತೋರಿಸು ಎಂದಿದ್ದಕ್ಕೆ ರೈಲಿನಲ್ಲಿ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯಿಂದ ಹಲ್ಲೆ, ಓರ್ವ ಸಾವು

ಮೊದಲ ಹಂತದಲ್ಲಿ 9, 10, 11, 12ನೇ ತರಗತಿ ಆರಂಭಿಸಲಾಗುವುದು. ಬ್ಯಾಚ್ ವೈಸ್ ತರಗತಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇವೆ. ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ವಿದ್ಯಾರ್ಥಿಗಳಿಗೆ ದಿನ ಬಿಟ್ಟು ದಿನ ತರಗತಿ ನಡೆಸಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರೆ, ಕಡಿಮೆ ಮಾಡಿ ಪಾಳಿ ಪದ್ಧತಿಯಲ್ಲಿ ನಡೆಸಲಾಗುತ್ತದೆ. ಕಡ್ಡಾಯವಾಗಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಒಂದು ಲಸಿಕೆಯನ್ನಾದರೂ ಹಾಕಿಸಿಕೊಂಡಿರಬೇಕು. ಹೀಗೆ ಶಾಲೆ ಕಾಲೇಜುಗಳನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಕೊರೊನಾ ಮಾರ್ಗಸೂಚಿಗಳ ಕುರಿತು ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.
ರಾಜ್ಯದ ಕೋವಿಡ್ ಸ್ಥಿತಿಗತಿಯನ್ನು ಆಧರಿಸಿ, ಪ್ರಾಥಮಿಕ ಶಾಲೆ ಮತ್ತು 8ನೇ ತರಗತಿ ಪ್ರಾರಂಭಿಸುವ ಬಗ್ಗೆ ಆಗಸ್ಟ್ ತಿಂಗಳ ಅಂತ್ಯದಲ್ಲಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು. ಶಾಲಾ-ಕಾಲೇಜು ಆರಂಭಕ್ಕೆ ಖಾಸಗಿ ಶಿಕ್ಷಣ ಒಕ್ಕೂಟಗಳು ಸ್ವಾಗತಿಸಿವೆ. ರುಪ್ಸಾ ಕರ್ನಾಟಕ ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪಾಳಿ‌ ಪದ್ಧತಿಯಲ್ಲಿ ಎಲ್ಲ ತರಗತಿ ಆರಂಭಿಸುವಂತೆ ಒತ್ತಾಯಿಸಿದ್ದಾರೆ.
ಒಟ್ಟಿನಲ್ಲಿ ಕಳೆದೊಂದು ವರುಷದ ನಂತರ ಶಾಲಾಕಾಲೇಜು ತೆರೆಯಲಿದೆ‌. ಸಭೆಯಲ್ಲಿ ಸಚಿವರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ, ಡಾ. ಕೆ. ಸುಧಾಕರ್, ತಜ್ಞರಾದ ಡಾ. ಸಿ.ಎನ್. ಮಂಜುನಾಥ್, ಡಾ. ದೇವಿಪ್ರಸಾದ್ ಶೆಟ್ಟಿ, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement