ನಾನು ಬಿಜೆಪಿ ಸರ್ಕಾರದ ಸಿಎಂ, ಎಚ್‌ಡಿಕೆ ಹೇಳಿಕೆಗೆ ಮಹತ್ವ ಕೊಡಬೇಕಿಲ್ಲ: ಬೊಮ್ಮಾಯಿ

ಹುಬ್ಬಳ್ಳಿ: ನಾನು ಬಿಜೆಪಿಗೆ ಬಂದು ಅನೇಕ ವರ್ಷಗಳಾಗಿ ಬಿಜೆಪಿಯವನೇ ಆಗಿದ್ದರೂ ನಾನು ಜನತಾ ಪರಿವಾರದನು ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಸಂಬದ್ಧ ಹೇಳಿಕೆಗೆಮಹತ್ವ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಕಾರ್ಯಕರ್ತ, ಬಿಜೆಪಿ ಸರ್ಕಾರದ ಮುಖ್ಯಮಂತ್ರಿ. ನಾನು ಎಂತಹ ಸಂದರ್ಭದಲ್ಲಿ ಜೆಡಿಎಸ್ ಪಕ್ಷ ತೊರೆದಿದ್ದೇನೆ ಎಂಬುದು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಗೊತ್ತಿದೆ ಎಂದು ಹೇಳಿದ್ದಾರೆ.
ಯಾವುದೋ ಉದ್ವೇಗದಲ್ಲಿ ಪ್ರೀತಂಗೌಡ ಹೊಂದಾಣಿಕೆ ರಾಜಕರಣದ ಕುರಿತು ಮಾತನಾಡಿದ್ದಾರೆ. ನಾನು ದೇವೇಗೌಡರನ್ನು ಭೇಟಿಯಾದ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ. ಹಾಸನದ ಬಿಜೆಪಿ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ’ ಎಂದು ತಿಳಿಸಿದರು.
ತಮ್ಮ ನಾಯಕನಿಗೆ ಸಚಿವ ಸ್ಥಾನ ದೊರೆಯಬೇಕು ಎನ್ನುವ ನಿರೀಕ್ಷೆ ಬೆಂಬಲಿಗರಿಗೆ ಇರುತ್ತದೆ. ನೆಹರೂ ಒಲೇಕಾರರಿಗೆ ಸಚಿವ ಸ್ಥಾನ ಸಿಗದೆ ಇರುವ ಕುರಿತು ಅವರ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದೇ ರೀತಿ, ಆನಂದ ಸಿಂಗ್‌, ತಮಗೆ ನೀಡಿರುವ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರ ಜೊತೆ ಈಗಾಗಲೇ ಮಾತನಾಡಿದ್ದೇನೆ ಎಂದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement